Breaking News

ಸುನೀಲ್ ಬೋಸ್ ನಿಮ್ಮ ಸೇವಕ ಒಂದು ಅವಕಾಶ ನೀಡಿ:ಸಚೀವ ಹೆಚ್ ಸಿ ಮಹಾದೇವಪ್ಪ


ವರದಿ :ಬಂಗಾರಪ್ಪ ಸಿ .

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಚುನಾವಣೆ ಬಳಿಕ ಸಚಿವರು ಹಿರಿಯ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹಾದೇವಪ್ಪ ತಿಳಿಸಿದರು.

ಹನೂರು ಕ್ಷೇತ್ರ ವ್ಯಾಪ್ತಿಯ ಮಲೆಮಹದೇಶ್ವರ ಬೆಟ್ಟ, ಮಾರ್ಟಳ್ಳಿ, ರಾಮಾಪುರ, ಕೌದಳ್ಳಿ, ಲೊಕ್ಕನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

ಲೋಕಸಭಾ ಚುನಾವಣೆ ಸಂಬಂಧ ಕಳೆದ ಎರಡು ಮೂರು ದಿನಗಳಿಂದ ಕ್ಷೇತ್ರದಲ್ಲಿ ನಿರಂತರವಾಗಿ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ, ಕಾಡಂಚಿನ ಗ್ರಾಮಗಳ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದು ನಾನು ಮನಗಂಡಿದ್ದೇನೆ, ಇದಲ್ಲದೇ ಮಾಜಿ ಶಾಸಕ ಆರ್ ನರೇಂದ್ರ ರವರು ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದ್ದಾರೆ.

ಕಾಡಂಚಿನಲ್ಲಿರುವ‌ ಜನರಿಗೆ ಶಾಶ್ವತ ಪರಿಹಾರ ಸಿಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ‌ ಸಚಿವರ ಜೊತೆ ಅಧಿಕಾರಿಗಳನ್ನೊಳಗೊಂಡತೆ ಮಲೆಮಹದೇಶ್ವರ ಬೆಟ್ಟದಲ್ಲಿ ಒಂದು ಸಭೆ ನಡೆಸಿ ಕಾನೂನಾತ್ಮಕವಾಗಿ ಪರಿಹಾರ ದೊರಕಿಸಿಕೊಡಲಾಗುವುದು, ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲೂ ಹಲವಾರು ಸೂಚನೆಗಳನ್ನು ನೀಡಿದ್ದು ಸಮಸ್ಯೆಗಳನ್ನು ಬಗೆಹರಿಸಲು ತಿಳಿಸಿದ್ದೇನೆ, ನನಗೆ ಮತ ಮುಖ್ಯವಲ್ಲ ಜನರ ಬದುಕು ಮುಖ್ಯ ಆಗಾಗಿ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದು ಪರಿಹಾರ ಮಾಡುವುದಾಗಿ ಭರವಸೆ ನೀಡಿದರಲ್ಲದೇ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಸುನೀಲ್ ಬೋಸ್ ಅವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಜಯಶೀಲರನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಆರ್ ನರೇಂದ್ರ ಮಾತನಾಡಿ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರು ಬೇಡಗಂಪಣ ಸಮುದಾಯಕ್ಕೆ ಯಾರೊಬ್ಬರು ವಸತಿ ಸೌಲಭ್ಯ ಕಲ್ಪಿಸಲಿಲ್ಲ ಕಳೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 1750 ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದೇವೆ, ಮಲೆಮಹದೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೇನೆ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ತಮಿಳುನಾಡಿನಿಂದ ಚಿಕ್ಕ ಬೋರವೆಲ್ ವಾಹನ ಕರೆತಂದು ಬೋರ್ವೆಲ್ ಕೊರಸಿ ನೀರಿನ ಸಮಸ್ಯೆ ಬಗೆಹರಿಸಿದ್ದೇನೆ, 8 ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲು 6 ಕೋಟಿ‌ ವೆಚ್ಚದಲ್ಲಿ ಕ್ರಿಯಾ ಯೋಜನೆ ಮಾಡಿ ಸರ್ಕಾರಕ್ಕೆ ಸಲ್ಲಿಸಿದ್ದೆ ವಿಧಾನಸಭಾ ಚುನಾವಣೆ ಬಂದ ಹಿನ್ನೆಲೆ ಸ್ಥಗಿತವಾಗಿದೆ, ಶಾಸಕರಾಗಿರುವವರು ಸಹ ಇದರ ಬಗ್ಗೆ ಗಮನಹರಿಸಲಿಲ್ಲ ಮುಂದಿನ ದಿನಗಳಲ್ಲಿ ಈ ಬಗ್ಗೆ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿ ಅನುದಾನವನ್ನು ಬಿಡುಗಡೆ ಮಾಡಿಸಿ ಅಭಿವೃದ್ಧಿ ಪಡಿಸಲಾಗಿವುದು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ ಕಾಂಗ್ರೆಸ್ ಸರ್ಕಾರ ನುಡಿದಂತ ನಡೆದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಭರವಸೆಗಳನ್ನು ಸರ್ಕಾರ ಬಂದ 5 ತಿಂಗಳಲ್ಲಿ ಈಡೇರಿಸಿದೆ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಯುವ ನ್ಯಾಯ, ಮಹಿಳಾ ನ್ಯಾಯ, ರೈತ ನ್ಯಾಯ, ಶ್ರಮಿಕ ನ್ಯಾಯ ಪಾಲುದಾರಿಕೆಯ ನ್ಯಾಯ ಯೋಜನೆಯಡಿ ಬಡವರಿಗೆ ಉತ್ತಮ ಯೋಜನೆ ಕೊಡಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬಂದರೆ ಈ ಎಲ್ಲ ಸೌಲಭ್ಯಗಳು ಬಡವರಿಗೆ ತಲುಪಲಿದೆ. ಇದಲ್ಲದೆ ನನಗೆ ಅಧಿಕಾರ ನೀಡಿದರೆ ಮಲೆ ಮಾದೇಶ್ವರ ಬೆಟ್ಟ ಕಾಡಂಚಿನ ಗ್ರಾಮಗಳ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.

ಮತದಾನ ಬಹಿಷ್ಕಾರ ಮಾಡಬೇಡಿ: ಮತದಾನ ಎಂಬುವುದು ಪ್ರಜಾಪ್ರಭುತ್ವದಲ್ಲಿ ಡಾ. ಬಿಆರ್ ಅಂಬೇಡ್ಕರ್ ರವರು ಕೊಟ್ಟಿರುವ ನಮ್ಮ ಹಕ್ಕು, ನಮ್ಮ ಮತವನ್ನು ಚಲಾಯಿಸಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಿ ಎಂದು ತಮ್ಮ ಹಕ್ಕನ್ನು ಕೇಳಬೇಕು. ಚುನಾವಣೆ ಮುಗಿದ ನಂತರ ಖಂಡಿತವಾಗಿಯೂ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸುತ್ತೇವೆ ತಾವು ಮತದಾನ ಬಹಿಷ್ಕಾರ ಮಾಡದೆ ಮತದಾನ ಮಾಡುವಂತೆ ಮಾಜಿ ಶಾಸಕ ಆರ್ ನರೇಂದ್ರ ಮನವಿ ಮಾಡಿದರು.
ಕಾಂಗ್ರೆಸ್ ಸೇರ್ಪಡೆ: ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ತೊರೆದು ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಮಾಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರುಗಳು ಕಾಂಗ್ರೆಸ್ ಸೇರ್ಪಡೆಯಾದರು.
ಇದೇ ಸಮಯದಲ್ಲಿ ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮಾಜಿ ಸಚಿವ ಕೋಟೆ ಶಿವಣ್ಣ, ಮಾಜಿ ಶಾಸಕ ಜಿ ಎನ್ ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಈಶ್ವರ್, ಮುಕುಂದವರ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ಇಗ್ನೇಶಿ ಮುತ್ತು ಉಪಾಧ್ಯಕ್ಷೆ ನದಿಯಾ ರಾಮಲಿಂಗಂ, ಸದಸ್ಯರುಗಳಾದ ಅರುಳ್ ಸೆಲ್ವಂ, ಸುರೇಶ್, ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಹರೀಶ್, ಕೆ .ಪಿ.ಸಿ.ಸಿ ಸದಸ್ಯ ನರೇಂದ್ರ, ಉದ್ಯಮಿ ರಂಗಸ್ವಾಮಿ ,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಚೇತನ್ ದೊರೆರಾಜು, ಅಲೆಮಾರಿ ಸಂಘದ ಅಧ್ಯಕ್ಷೆ ಪಲ್ಲವಿ, ಮುಖಂಡರಾದ ನವನೀತ್ ಗೌಡ, ಪೆದ್ದನ ಪಾಳ್ಯ ಮಣಿ, ಶಿವು, ಎಲ್ ನಾಗೇಂದ್ರ ರಾಜು, ಮಾದೇಶ್, ಅಶ್ವಿನ್, ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

ಶಿಷ್ಟಾಚಾರಕ್ಕಾದರೂ ಗ್ರಾಪಂ ಸದಸ್ಯರನ್ನು ಹಿಟ್ನಾಳ್ ಭೇಟಿಯಾಗಿಲ್ಲ ,ರಮೇಶ್ಕಾಳೆಅಸಮಾಧಾನ

ಗಂಗಾವತಿ.ಮೇ.02: ಕೊಪ್ಪಳ ಲೋಕಸಭಾ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರುಮತದಾನದ ದಿನ ಹತ್ತಿರವಾಗುತ್ತಿದ್ದರೂ ಕೂಡ ಮುಂಚೂಣಿ ನಾಯಕರ ಓಲೈಕೆಯಲ್ಲಿಯೇ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.