Breaking News

ಮಲೇರಿಯಾ ಬಗ್ಗೆ ಮುಂಜಾಗ್ರತೆ ವಹಿಸಿ ಗುರುರಾಜ್ ಹಿರೇಮಠ ಸಲಹೆ

Gururaj Hiremath advises to take precautions against malaria


ಗಂಗಾವತಿ. :ಏ.25: ಚಳಿ, ಜ್ವರ, ನಡುಕ ಇವುಗಳ ಮಲೇರಿಯಾದ ಪ್ರಮುಖ ಲಕ್ಷಣಗಳಾಗಿದ್ದು, ಇವುಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ, ತಕ್ಷಣ ರಕ್ಷ ಪರೀಕ್ಷೆ ಮಾಡಿಸಿ ಅದಕ್ಕೆ ಸೂಕ್ತವಾದ ಚಿಕಿತ್ಸೆ ಪಡೆದುಕೊಳ್ಳಬೇಕು. ಮಲೇರಿಯಾದ ಬಗ್ಗೆ ಭಯಪಡಬೇಡಿ ಮುಂಜಾಗ್ರತೆ ವಹಿಸಿ ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗುರುರಾಜ ಹಿರೇಮಠ ಸಲಹೆ ನಿಡಿದರು.ಗಂಗಾವತಿ 28 ನೇ ವಾರ್ಡ ಹಿರೇಜಂತಕಲ್ ಕಿಲ್ಲಾ ಏರಿಯಾ ಶ್ರೀ ಅಂಭಾಬವಾನಿ ದೇವಸ್ಥಾನದಲ್ಲಿ ಗುರುವಾರ ಜರುಗಿದ ವಿಶ್ವ ಮಲೇರಿಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸೋಂಕಿತ ಅನಾಫಿಲೀಸ್ ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ಕಾಯಿಲೆ ಬರುತ್ತದೆ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಮನೆ ಸುತ್ತ ನೀರು ಸಂಗ್ರಹವಾಗದಂತೆ ನೋಡಿಕೊಂಡು ಸ್ವಚ್ಛತೆಯನ್ನು ಕಾಪಾಡುವುದು, ನೀರಿನ ಸಂಗ್ರಹಗಳನ್ನು ಭದ್ರವಾಗಿ ಮುಚ್ಚಿಡುವುದು, ಸೊಳ್ಳೆ ಪರದೆ ಮತ್ತು ಶುದ್ಧವಾದ ನೀರನ್ನು ಕುಡಿಯುವುದು, ಸಮತೋಲಿತ ಆಹಾರವನ್ನು ಸೇವಿಸುವುದು, ಮಳೆಯಲ್ಲಿ ನೆನೆಯದಂತೆ ಲಕ್ಷ್ಯವಹಿಸುವುದು ಸೇರಿದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವದರ ಮೂಲಕ ಮಲೇರಿಯಾ ಕಾಯಿಲೆ ಬರದಂತೆ ತಡೆಯಬಹುದಾಗಿದೆ ಎಂದು ಅನೇಕ ಮುಂಜಾಗ್ರತಾ ಕ್ರಮಗಳನ್ನು ತಿಳಿಸಿದರು.

ನಂತರ ಮಾತನಾಡಿದ ನಗರಸಭೆ ಸದಸ್ಯರಾದ ಹುಲಿಗೆಮ್ಮ ಕಿರಿಕಿರಿ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿಕ್ಕ ಮಕ್ಕಳನ್ನು ಹೊರಗಡೆ ಕಳುಹಿಸಬೇಡಿ ಜೊತೆಗೆ ಪ್ರತಿಯೊಬ್ಬರೂ ನಿಂಬೆರಸ ಹಾಗೂ ನೀರು ಹೆಚ್ಚಾಗಿ ಕುಡಿಯಲು ತಿಳಿಸಲಾಯಿತು. ಜೊತೆಗೆ ಜ್ವರ. ವಾಂತಿ. ಭೇದಿ. ತಲೆನೋವು ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರ ಆಸ್ಪತ್ರೆಗೆ ಹೋಗಿ ಪರೀಕ್ಷಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು

ಈ ಸಂದರ್ಭದಲ್ಲಿ ಆರೋಗ್ಯ ಕಿರಿಯ ಸಹಾಯಕರಾದ ಕೆ.ಹನುಮೇಶ,ರಮೇಶ,
ಮಲೇರಿಯಾ ಲಿಂಕ್ ವರ್ಕ್ ಹೆಚ್.ಸುರೇಶ,ರಮೇಶ ಸಾಲಮನಿ,ಆರೋಗ್ಯ ಸಂಬಂಧಿಗಳಾದ ಸರಸ್ವತಿ, ಆಶಾ ಕಾರ್ಯಕರ್ತೆ ರಂಗಮ್ಮ,ಮಹಾದೇವಮ್ಮ,ಗೌರಮ್ಮ,ಸೇರಿದಂತೆ ಇತರರು ಇದ್ದರು

About Mallikarjun

Check Also

ರಾಷ್ಟ್ರೀಯ ಪಕ್ಷ ಬಿಎಸ್ಪಿಗೆ ಅವಕಾಶನೀಡಿ:ಎಂ.ಕೃಷ್ಣಮೂರ್ತಿ

ಕೊಪ್ಪಳ.ಮೇ.04: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಕ್ಕೆ ಬುದ್ಧಿ ಕಲಿಸಿ ಬಿಎಸ್ ಪಿ ಪಕ್ಷವನ್ನು ಬೆಂಬಲಿಸುವಂತೆ ಬಹುಜನ ಸಮಾಜ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.