Breaking News

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಬಲಿಷ್ಠವಾಗಿದೆಗ್ಯಾರಂಟಿ ಯೋಜನೆಗಳು ಆರ್ಥಿಕ ಶಕ್ತಿಗೆ ಪೂರಕ: ಮಾಜಿ ಸಂಸದ ಹೆಚ್.ಜಿ ರಾಮುಲು

Congress led by CM Siddaramaiah is strong
Guarantee schemes complement economic power: Former MP HG Ramulu

ಜಾಹೀರಾತು
IMG 20240428 184446 258x300

ಗಂಗಾವತಿ: ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜೀವನ ನಡೆಸಲು ತುಂಬಾ ಪ್ರಾಯಾಸ ಪಡುತ್ತಿರುವ ಬಡವರಿಗೆ ಗ್ಯಾರಂಟಿ ಯೋಜನೆಗಳು ಆರ್ಥಿಕ ಶಕ್ತಿಗೆ ಪೂರಕವಾಗಿವೆ, ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಗ್ಯಾರಂಟಿಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಲಿವೆ ಎಂದು ಮಾಜಿ ಸಂಸದ ಹೆಚ್.ಜಿ.ರಾಮುಲು ಹೇಳಿದರು.
ಅವರು, ತಮ್ಮ ನಿವಾಸದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು

. ಇತ್ತೀಚಿಗೆ ಜಾತಿ, ಧರ್ಮ ಮತ್ತು ಹಣದ ಆಧಾರದ ಮೇಲೆ ಚುನಾವಣೆಗಳು ನಡೆಯುತ್ತಿರುವುದು ಶೋಚನೀಯ, ಜಾತಿ ರಾಜಕಾರಣ ಸಮಾಜಕ್ಕೆ ಮಾರಕ ಅರ್ಹ ಮತ್ತು ಉತ್ತಮ ಜನ ಸೇವಕರನ್ನು ಆಯ್ಕೆ ಮಾಡಬೇಕು, ಸ್ನೇಹ, ಸೌಹಾರ್ಧತೆ, ಪರಸ್ಪರ ಬಾಂಧವ್ಯ ವೃದ್ಧಿಸುವಂತೆ ನಾಯಕನನ್ನು ಚುನಾಯಿಸಬೇಕು, ಸ್ವಾಂತAತ್ರ ನಂತರ ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ, ಶಾಲಾ ಕಾಲೇಜುಗಳು, ವಿಮಾನ ನಿಲ್ದಾಣಗಳು, ರೈಲ್ವೇ ನಿಲ್ದಾಣಗಳು, ಸರಕಾರಿ ಸಾಮ್ಯದ ಅನೇಕ ಕಾರ್ಖಾನೆಗಳು, ಆಣೇಕಟ್ಟುಗಳು ಸೇರಿದಂತೆ ದೇಶ ಕಟ್ಟುವ ಕೆಲಸ ಮಾಡಿದೆ ಎಂದು ತಿಳಿಸಿದರು.
ಮಾಜಿ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿರುವುದು ಪಕ್ಷದ ಶಕ್ತಿ ವೃದ್ಧಿಗೆ ಸಹಕಾರಿಯಾಗಿದೆ, ಹೋರಾಟ ಬಲದಿಂದ ಸಂಗಣ್ಣ ಅವರಿಗೆ ಅಪಾರ ರಾಜಕೀಯ ಅನುಭವವಿದ್ದು, ಸೂಕ್ತ ಸಮಯದಲ್ಲಿ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ದೇಶ ಮುನ್ನಡೆಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದ್ದು, ಇಂಥ ಅನುಭವಿ ರಾಜಕಾರಣಿಗಳು ಆಗಮಿಸುವುದರಿಂದ ಪಕ್ಷದ ವರ್ಚಸ್ಸು ವೃದ್ಧಿಸಲಿದೆ. ಸಿ.ಎಂ.ಸಿದ್ದರಾಮಯ್ಯ ಅವರಿಂದ ಪಕ್ಷ ತುಂಬಾ ಬಲಿಷ್ಠವಾಗಿದೆ, ಅವರು ಗಂಗಾವತಿ ಆಗಮಿಸುತ್ತಿರುವುದು ಹಿಂದುಳಿದ, ದಲಿತ ಹಾಗು ಅಲ್ಪ ಸಂಖ್ಯಾತ ಮತಗಳ ಕೂಢೀಕರಣಕ್ಕೆ ಸಹಕಾರಿಯಾಗಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.