Breaking News

ಇಕ್ಬಾಲ್ ಅನ್ಸಾರಿ ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡಿ: ರಾಜಾ ಬನ್ನಿಗಿಡದ ಕ್ಯಾಂಪ್.

Appoint Iqbal Ansari to Legislative Council: Raja Bannigidada’s camp

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಲ್ಯಾಣ ಸಿರಿ: ಗಂಗಾವತಿ

ಗಂಗಾವತಿ: ಉತ್ತಮ ಸಂಘಟನಾಕಾರರು, ಉತ್ತಮ ವಾಕ್ಪಟು, ಪ್ರಭಾವಿ ನಾಯಕರು, ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ನಾಯಕರು ಆಗಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡಿಕೊಳ್ಳಬೇಕೆಂದು ಕಾಂಗ್ರೆಸ್ ಯುವ ಮುಖಂಡ ರಾಜಾ ಬನ್ನಿಗಿಡದ ಕ್ಯಾಂಪ್ ಒತ್ತಾಯಿಸಿದ್ದಾರೆ.

ಸದ್ಯದಲ್ಲಿಯೇ ಖಾಲಿ ಆಗಲಿರುವ ವಿಧಾನ ಪರಿಷತ್ 11 ಸ್ಥಾನಗಳ ಪೈಕಿ 7 ಸ್ಥಾನಗಳಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ, ಆ 7 ಸ್ಥಾನಗಳ ಪೈಕಿ 1ರಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಯವರಿಗೆ ಅವಕಾಶ ಮಾಡಿಕೊಡುವ ಮೂಲಕ ಅವರ ಸೇವೆಯನ್ನು ಉತ್ತರ ಕರ್ನಾಟಕದಲ್ಲಿ ಬಳಸಿಕೊಳ್ಳಬೇಕು.

ಎ.ಐ.ಸಿ.ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಮತ್ತು ಹಿರಿಯ ಸಚಿವರು, ನಾಯಕರುಗಳು ಉತ್ತರ ಕರ್ನಾಟಕ ಅದರಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಈ ಬಾರಿ ಹೆಚ್ವಿನ ಪ್ರಾಶಸ್ತ್ಯ ಕೊಟ್ಟು, ಪ್ರಭಾವಿ ನಾಯಕರಾದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡು ಮುಖಾಂತರ ನಮ್ಮ ಭಾಗಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಅವರು ಪತ್ರಿಕಾ ಹೇಳಿಕೆ ಮುಖಾಂತರ ಮನವಿ ಮಾಡಿಕೊಂಡಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *