ವರದಿ : ಬಂಗಾರಪ್ಪ ಸಿ ಹನೂರು .
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮುಖದಲ್ಲಿ ಹುಂಡಿಗಳನ್ನು ತೆರೆದು, ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.
ಎಣಿಕೆ ಕಾರ್ಯವು ರಾತ್ರಿ 8:30ರವರೆಗೂ ನಡೆಯಿತು. ಈ ಬಾರಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಇದ್ದಿದ್ದರಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದಲ್ಲದೆ ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ
ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,58,44,097 6. 2, 93 0 ៩ 3.350 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ ಸೌದಿ ಅರೇಬಿಯಾ, ಜಪಾನ್, ನೇಪಾಳ, ಕತಾರ್ ದೇಶಗಳ 4 ನೋಟುಗಳು, ಚಲಾವಣೆಯಲ್ಲಿ ಇಲ್ಲದ 2000 ರೂ. ಮುಖಬೆಲೆಯ 25 ನೋಟುಗಳು ಹುಂಡಿಯಲ್ಲಿ ಸಂಗ್ರಹವಾಗಿವೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಸೇರಿದಂತೆ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನೌಕರರು ಭಾಗವಹಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…