Breaking News

ಲೋಕಸಭಾಚುನಾವಣೆ: ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಸಾವಳಗಿ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಗದ್ದಿಗೌಡ ಅವರು ಗೆಲುವುಗಳನ್ನು ಸಾಧಿಸುತ್ತಿದ್ದಂತೆ ಪಟ್ಟಣದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ಸಂಭ್ರಮಾಚರಣೆ ಮಾಡಿದರು.

ಜಾಹೀರಾತು

ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪಕ್ಷ ಗೆಲುವು ಸಾಧಿಸುತ್ತಿದಂತೆ ನಗರಕ್ಕೆ ಆಗಮಿಸಿದ ಜಮಖಂಡಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಅವರೊಂದಿಗೆ ಸಂಭ್ರಮಾಚರಣೆ ನಡೆಸಿದರು.

ನಂತರ ಮಾತನಾಡಿದ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಅವರು ಬಾಗಲಕೋಟೆಗೆ ಪಿ ಸಿ ಗದ್ದಿಗೌಡ ಅವರ ಗೆಲುವಿನ ಸಹಕರಿಸಿದ ಹಾಗೂ ದೇಶದಲ್ಲಿ ಪ್ರಧಾನಿ ಮೋದಿ ಅವರ ಆಡಳಿತವನ್ನು ನೋಡಿ ದೇಶದಲ್ಲಿ ಅಭಿವೃದ್ಧಿಗಾಗಿ ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಸಹಕರಿಸಿದ ಎಲ್ಲ ಮತದಾರರಿಗೂ ಕಾರ್ಯಕರ್ತರಿಗೆ ಧನ್ಯವಾದಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ಪರಮಗೌಡ, ಗ್ರಾಮ ಪಂಚಾಯತ ಸದಸ್ಯರಾದ ಸುಜೀತಗೌಡ ಪಾಟೀಲ, ಉಮೇಶ್ ಜಾಧವ್ ರಾಜುಗೌಡ ಪಾಟೀಲ, ಕುಮಾರ್ ಬಾಪಕರ, ಸಿದ್ದಾರ್ಥ್ ತಳಕೇರಿ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

About Mallikarjun

Check Also

ಹಲವು ಸ್ಥಳಗಳಲ್ಲಿ ಸಿಸಿ ರಸ್ತೆ ಹಾಗೂ ಒಳ ಚರಂಡಿ ಕಾಮಗಾರಿಗೆ ಶಾಸಕ ಎಮ್ ಆರ್ ಮಂಜುನಾಥ್ ಅವರಿಂದಭೂಮಿಪೂಜೆ

MLA M.R. Manjunath performs Bhoomi Pooja for CC road and internal drainage works at several …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.