Breaking News

ಪ್ರತಿಯೊಬ್ಬರೂ ಗಿಡಗಳನ್ನ ನಡಬೇಕು: ವೆಂಕಟೇಶ

ಗಂಗಾವತಿ,05:ಪ್ರತಿ ವರ್ಷ ಜೂನ್‌ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವೆಂಕಟೇಶ ಹೇಳಿದರು.

ಜಾಹೀರಾತು

ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಗಂಗಾವತಿ ಸರ್ಕಾರಿ ಉರ್ದು ಪ್ರೌಢ ಶಾಲೆಯ ಆವರಣದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.
ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಆದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದರು.

ಎಸ್.ಡಿ.ಎಂ.ಸಿ.ಅಧ್ಯಕ್ಷ ಮಹಮ್ಮದ್ ದಳಪತಿ ಮಾತನಾಡಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಪ್ರತಿವರ್ಷ 143ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಭಾಗಿಯಾಗುತ್ತವೆ. ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ವಿವಿಧ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಪ್ರಮುಖ ಸಂಸ್ಥೆಗಳು, ಎನ್‌ಜಿಒಗಳು, ಸಮುದಾಯಗಳು, ಸರ್ಕಾರಗಳು ವಿಶ್ವಾದ್ಯಂತ ಪರಿಸರ ದಿನವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತವೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿ ರಾಘವೇಂದ್ರ, ಮಂಜುನಾಥ, ಮುಖ್ಯೋಪಾಧ್ಯಾಯರಾದ ಎಂ.ಬಿ.ಕೊಪ್ಪಳ, ಸಹ ಶಿಕ್ಷಕರಾದ ಮಹಮ್ಮದ್ ಅಲಿ,ವಿಠಪ್ಪ ನುಗ್ಲಿ,ನಾಜನೀನ್ ಫಾತಿಮಾ,ರಜನಿಬಾಗೇವಾಡಿ,ಫರಹೀನ್ ಫಾತಿಮಾ,ಆರೀಪಾ ಬೇಗಂ, ಸೇರಿದಂತೆ ಇತರರು ಇದ್ದರು

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.