ಕುಕನೂರು : ಪ್ರತಿಯೊಬ್ಬ ನಾಗರಿಕರು ತಮ್ಮ ಹುಟ್ಟು ಹಬ್ಬದಂದು ಒಂದು ಸಸಿ ಬೆಳಸಿ ಅವುಗಳನ್ನು ಪೋಷಿಸಿ ಸಂರಕ್ಷಣೆ ಮಾಡುವ ಮೂಲಕ ಪರಿಸರವನ್ನು ಉಳಿಸಲು ಮುಂದಾಗಬೇಕು ಎಂದು ಎಸ್ ಎಫ್ ಎಸ್ ಶಾಲೆಯ ಮುಖ್ಯಸ್ಥರಾದ ಫಾದರ್ ಸಜ್ಜಿ ಜಾರ್ಜ ಹೇಳಿದರು.
ಅವರು ಕುಕನೂರ ಪಟ್ಟಣದ ಎಸ್ ಎಫ್ ಎಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಪರಿಸರ ಸಂರಕ್ಷಣೆ ಹಾಗೂ ಅದರ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ನಂತರದಲ್ಲಿ ಕುಕನೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಪ್ರಭಾತ ಪೇರಿ ಮೂಲಕ ಸಸಿ ಹಿಡಿದು ಸಾಗಿ ಸ್ಥಳೀಯ ಪಟ್ಟಣ ಪಂಚಾಯಿತಿ, ವೀರಭದ್ರಪ್ಪ ವೃತ್ತದಲ್ಲಿ ಹಾಗೂ ಬಸ್ ನಿಲ್ದಾಣದಲ್ಲಿ ನೂರಾರು ಸಾರ್ವಜನಿಕರಿಗೆ ಸಸಿಗಳನ್ನು ನೀಡಿ ಅವುಗಳನ್ನು ಸಂರಕ್ಷಿಸಿ ಬೆಳಸಿ ಪೋಷಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರಾದ ಫಾದರ್ ಆರೋಗ್ಯ ಸ್ವಾಮಿ, ಶಿಕ್ಷಕರು, ಶಿಕ್ಷಕಿಯರು ಇದ್ದರು.