ಪ್ರತಿಯೊಬ್ಬರೂ ಮನೆಗೊಂದು ಸಸಿ ಬೆಳೆಸಿಜಿ.ಪಂ. ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಹೇಳಿಕೆ

Mallikarjun
1 Min Read
ಜಾಹೀರಾತು

ಹೇಮಗುಡ್ಡದಲ್ಲಿ ವನಮಹೋತ್ಸವ ಕಾರ್ಯಕ್ರಮ

ಜಾಹೀರಾತು

ಗಂಗಾವತಿ : ಪ್ರತಿಯೊಬ್ಬರೂ ಮನೆಗೊಂದು ಗಿಡ ಬೆಳೆಸಬೇಕು ಎಂದು ಜಿ.ಪಂ. ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಅವರು ಹೇಳಿದರು.

ತಾಲೂಕಿನ ಹೇಮಗುಡ್ಡ ಗ್ರಾಮದ ದುರ್ಗಾದೇವಿ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾ.ಪಂ.ವತಿಯಿಂದ ಶುಕ್ರವಾರ ಆಯೋಜಿಸಿದ್ದ ವನ ಮಹೋತ್ಸವಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ನಶಿಸುತ್ತಿರುವ ಪರಿಸರ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು. ಗ್ರಾಮದಲ್ಲಿ ಸುಂದರ ಪರಿಸರ ನಿರ್ಮಾಣ ಮಾಡುವ ಕಾರ್ಯವಾಗಬೇಕು ಎಂದರು.

ಮಳೆಗಾಲ ಇದ್ದು ರೈತರು ತಮ್ಮ ಹೊಲದ ಬದುವಿನಲ್ಲಿ ಸಸಿ ನೆಟ್ಟು, ಪೋಷಿಸಬೇಕು. ಪಾಲಕರು ತಮ್ಮ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಬೇಕು ಎಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಇಂದಿರಾ, ಗ್ರಾಪಂ ಅಧ್ಯಕ್ಷರಾದ ಶಿವಮೂರ್ತಿ ಗೊಲ್ಲರ್, ಉಪಾಧ್ಯಕ್ಷರಾದ ಲಿಂಗಪ್ಪ ಭೋವಿ, ಕಾರ್ಯದರ್ಶಿಗಳಾದ ಭೀಮಪ್ಪ ನಾಯಕ, ಗ್ರಾಪಂ ಸದಸ್ಯರು, ಎಸ್ ಬಿಎಂ ಜಿಲ್ಲಾ ಸಮಾಲೋಚಕರಾದ ರಾಮಣ್ಣ,
ಎನ್ ಆರ್ ಎಲ್ ಎಂ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

Total Views: 0
Share This Article