Breaking News

ನೀಟ್ ಪ್ರವೇಶ ಪರೀಕ್ಷೆಯಲ್ಲಿಭ್ರಷ್ಟಾಚಾರ ನಿಷ್ಪಪಕ್ಷಪಾತ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ನಿಷ್ಪಕ್ಷಪಾತ ವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿ ಗಳು ನಗರದಲ್ಲಿ ಪ್ರತಿ ಭಟನೆ ನಡೆಸಿದರು. ನಗರದ ಹಳೆ ಬಸ್ ನಿಲ್ದಾಣದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಾಹೀರಾತು

ವೈದ್ಯಕೀಯ ಶಿಕ್ಷಣ ವ್ಯಾಪಾರವಾಗಿದ್ದು, ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕಡು ಕಷ್ಟವಾಗಿದೆ. ಹಗಲಿರುಳು ತಮ್ಮ ಪರಿಶ್ರಮ ಹಾಕಿ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ನೀಟ್ ಪರೀಕ್ಷೆಯ ಹಗರಣವು ಶಿಕ್ಷಣ ಕ್ಷೇತ್ರದ ಅತ್ಯಂತ ದೊಡ್ಡ ಹಗರಣ’ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ತುಳಜಾರಾಮ್ ಏನ್.ಕೆ ಆರೋಪಿಸಿದರು.
ಜೂನ್ 4 ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯು ಜಿ ಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್ ಟಿ ಎ ಸಮಜಾಯಿಸಿ ನೀಡಿದೆ. ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂಬ ಆರೋಪವಿದೆ. ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷಷ ಪಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ನೀಟ್ ಪರೀಕ್ಷೆಗಾಗಿ ಲಕ್ಷಾಂತರ ರೂಪಾಯಿ ಲಂಚ ಪಡೆದಿರುವುದು ಗೊತ್ತಾಗಿದೆ. ಈ ಹಗರಣದಲ್ಲಿ ಭಾಗಿಯಾದ ಎಲ್ಲ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ನಂತರ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ ಈ ಮುಂಚೆ, ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ, ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ ಎಂದು ನಾವು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ನಮ್ಮ ಎಚ್ಚರಿಕೆಯು ಇಂದು ನಿಜವಾಗಿದೆ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರಿಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಮತ್ತು ಅಮಾಯಕ ವಿದ್ಯಾರ್ಥಿಗಳು ಇದರ ಬಲಿಪಶುಗಳಾಗಿದ್ದಾರೆ.
ಈ ಹಿನ್ನೆಲೆಯಲ್ಲಿ, ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಐಡಿಎಸ್ಓ ಸರ್ಕಾರವನ್ನು ಆಗ್ರಹಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಎಐಡಿಎಸ್ಓ ಸದಸ್ಯರಾದ ಪ್ರದೀಪ್, ಸುಜಾತ, ರಾಹುಲ್ ಬಸವರಾಜ್, ಅರುಂಧತಿ, ಸಕ್ರಮ್ಮ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

About Mallikarjun

Check Also

ಎಫ್.ಕೆ.ಸಿ.ಸಿ.ಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26 ; 6 ವಲಯಗಳಲ್ಲಿ 6 ಸಾವಿರ ಉದ್ಯೋಗಾವಕಾಶಗಳು ಲಭ್ಯ

FKCCI to hold Saturday Udyog Utsav 2025-26; 6,000 job opportunities available in 6 zones ಬೆಂಗಳೂರು, …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.