
ಬೆಂಗಳೂರು; ನಟಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಆರೋಪದ ಮೇಲೆ ಅಪಹರಿಸಿಕೊಂಡು ಚಿತ್ರದುರ್ಗದಿಂದ ಹೋದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಎಂದು ನೀಡಬೇಕು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ
ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿ, ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಅದಕ್ಕೆ ಕಾನೂನು ಶಿಕ್ಷೆ ನೀಡುತ್ತಿತ್ತು.
ಅದು ಬಿಟ್ಟು ನಟ ದರ್ಶನಾಗಲಿ ಅಥವಾ ಅವರ ಹಿಂಬಾಲಕರಾಗಲಿ ಶಿಕ್ಷೆ ನೀಡುವುದಕ್ಕೆ, ಕೊಲೆ ಮಾಡುವುದಕ್ಕೆ ಅಧಿಕಾರ ನೀಡಿದವರಾರು? ಕೃತ್ಯವನ್ನು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ಉಗ್ರವಾಗಿ ಖಂಡಿಸುತ್ತದೆ ಮತ್ತು ರೇಣುಕಾಸ್ವಾಮಿ ಕುಟುಂಬಕ್ಕೆ ಸೂಕ್ತ ಪರಿಹಾರವನು ನೀಡಬೇಕು ಮತ್ತು ಕೊಲೆ ಘಟನೆಯ ಎಲ್ಲರಿಗೂ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಒತ್ತಾಯಿಸುತ್ತದೆ. ಕಠಿಣ ಶಿಕ್ಷೆ ನೀಡದಿದ್ದಲ್ಲಿ ಸಂಘಟನೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಒತ್ತಾಯಿಸಿದ್ದಾರೆ.
Kalyanasiri Kannada News Live 24×7 | News Karnataka
