Breaking News

ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ-ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ-ಶಿಸ್ತು ಅಗತ್ಯ: ಜಯಪ್ರಕಾಶ್

ದ್ವಿಚಕ್ರ ವಾಹನ ಚಲಾಯಿಸುವಾಗ ವೇಗದ ಮಿತಿ ಅಳವಡಿಸಿಕೊಳ್ಳಿ

ಕೊಪ್ಪಳ: ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಜನೆಯ ಸಮಯ ಅಮೂಲ್ಯವಾದದ್ದು. ಸಮಯಪ್ರಜ್ಞೆ ಮತ್ತು ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾದ ಸಂಗತಿಯಾಗಿದೆ ಎಂದು ಕೊಪ್ಪಳ ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಜಯಪ್ರಕಾಶ್ ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಒಳ ಆವರಣದಲ್ಲಿ ಬುಧವಾರ  ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾಲಯ ಘಟಕ ಹಾಗೂ ಸ್ವ ಆರ್ಥಿಕ ಘಟಕಗಳು ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಅಂಗವಾಗಿ ವಿಶೇಷ ಅರಿವಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಹುತೇಕರು ಮಾದಕ ವಸ್ತುಗಳ ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇದರಿಂದ ಅವರ ಭವಿಷ್ಯ ಅತಂತ್ರವಾಗಿ ಕಳ್ಳತನ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಇದರೊಂದಿಗೆ ಕುಟುಂಬದ ಹಾಗೂ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಇಂಥ ಕೃತ್ಯಗಳ ಕಡಿವಾಣಕ್ಕೆ ಬಲಿಷ್ಠ ಕಾನೂನಿದೆ ಎಂದು ತಿಳಿವಳಿಕೆ ಮೂಡಿಸಿದರು.

ಇಂದಿನ ಯುವಕರು ಮಾದಕ ವಸ್ತುಗಳ ಸೇವನೆಯಂಥ ದುಶ್ಚಟಗಳಿಗೆ ಬಲಿಯಾಗದಿರಲು ಸಲಹೆ ನೀಡಿದ ಅವರು,  ವಿದ್ಯಾರ್ಥಿಗಳು ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ವೇಗದ ಮಿತಿಯನ್ನು ಕಾಯ್ದುಕೊಳ್ಳುವುದು ಅವಶ್ಯಕ ಎಂದು ತಿಳಿಸಿದರು. 

ಕಾಲೇಜಿನ ಆಂತರಿಕ ದೂರುಗಳ ಸಮಿತಿಯ ಆಶಯದಂತೆ ವಿದ್ಯಾರ್ಥಿನಿಯರಿಗೆ ಅಪರಿಚಿತ ಸಂಖ್ಯೆಗಳಿಂದ ಕರೆಗಳನ್ನು ಅಥವಾ ಸಂದೇಶಗಳನ್ನು ಮಾಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. 

ವಿದ್ಯಾರ್ಥಿನಿಯರು ಸಹ ಅಪರಿಚಿತ ಸಂಖ್ಯೆಗಳಿಂದ ಬರುವ ಸಂದೇಶ ಹಾಗೂ ಕರೆಗಳಿಗೆ ಪ್ರತಿಕ್ರಿಯಿಸದಂತೆ ಎಚ್ಚರಿಕೆಯಿಂದ ನಡೆದುಕೊಳ್ಳಲು ಜಯಪ್ರಕಾಶ್ ಸಲಹೆ ನೀಡಿದರು. 

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ತಿಮ್ಮಾರೆಡ್ಡಿ ಮೇಟಿ  ಮಾತನಾಡಿ, ಮಾದಕ ದ್ರವ್ಯಗಳ ಸೇವನೆಯಂತಹ ದುಶ್ಚಟಗಳು ಇಂದು ಜಾಗತಿಕ ಸಮಸ್ಯೆ ಆಗಿದೆ. ಇದನ್ನು ವಿರೋಧಿಸುವ ನಿಟ್ಟಿನಲ್ಲಿ ಇಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳು ಭವಿಷ್ಯದ ದಿನಗಳನ್ನು ಗಮನದಲ್ಲಿ ಇಟ್ಟುಕೊಂಡು ಇತರರಿಗೆ ಮಾದರಿಯಾಗುವಂಥ ಕಾರ್ಯಗಳಲ್ಲಿ ತೊಡಗಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಎರಡೂ ಘಟಕಗಳ ಸಂಚಾಲಕರಾದ ಡಾ.ಡಿ.ಎಚ್ ನಾಯ್ಕ ಹಾಗೂ ಶ್ರೀಮತಿ ಗಾಯತ್ರಿ ಭಾವಿಕಟ್ಟಿ  ಉಪಸ್ಥಿತರಿದ್ದರು. ಕುಮಾರಿ ಪಲ್ಲವಿ ಪ್ರಾರ್ಥಿಸಿದರು. ಪೊಲೀಸ್ ಕಾನ್ಸ್‌ಟೇಬಲ್ ಕರಬಸಪ್ಪ ನಿರೂಪಿಸಿದರು.

About Mallikarjun

Check Also

ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ದ ಜುಲೈ 01 ರಂದು ಡಿ.ಎಸ್ ಎಸ್ಪ್ರತಿಭಟನೆ

ತಿಪಟೂರು: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಗಳು ಮಹಿಳೆಯರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಜುಲೈ 01ರಂದು ಸೋಮವಾರ ಕರ್ನಾಟಕ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.