ಕಲ್ಯಾಣಸಿರಿ ವಿಶೇಷ

ಯಶಸ್ವಿಯಾಗಿ ನಡೆದ ರೈತರ ಕುಂದು ಕೊರತೆಗಳ ಸಭೆ .

Successful meeting of farmers.


ವರದಿ : ಬಂಗಾರಪ್ಪ .ಸಿ
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ರೈತರಿಗಿರುವಂತಹ ಹಲವಾರು ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ತಹಸೀಲ್ದಾರ್ ವೈ ಕೆ ಗುರುಪ್ರಸಾದ್ ತಿಳಿಸಿದರು..

ಹನೂರು ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ರೈತರ ಕುಂದು ಕೊರತೆ ನಿವಾರಣೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ನಮ್ಮ
ತಾಲೂಕಿನಲ್ಲಿರುವ ವಿವಿಧ ಇಲಾಖಗಳಲ್ಲಿ ಸಮಸ್ಯೆಗಳಿದ್ದಲ್ಲಿ ಅಂತಹ ಸಮಸ್ಯೆಗಳನ್ನು ರೈತರು ಅಧಿಕಾರಿಗಳ ಜೊತೆಯಲ್ಲಿ ನೆರವಾಗಿ ಆಗಮಿಸಿ ಮುಕ್ತವಾಗಿ ಚರ್ಚಿಸಲು ಅವಕಾಶವಿದ್ದು ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಲ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ರೈತರು ಮಾತನಾಡಿ ಹನೂರು ತಾಲೂಕಿನ ಉದ್ದಗಲಕ್ಕು ರಸ್ತೆ ತುಂಬಾ ಅವ್ಯವಸ್ಥೆಯಾಗಿದೆ ಗುಂಡಿ ಮಯವಾಗಿದೆ ಜೊತೆಗೆ ನಾಲ್ ರೋಡು ರಾಮಾಪುರ ರಸ್ತೆ ಗುದ್ದಲಿ ಪೂಜೆ ಮಾಡಿದರು ಸಹ ಕಾಮಗಾರಿ ಪ್ರಾರಂಭವಾಗಿಲ್ಲ ಈಗಾಗಿ ತುಂಬಾ ತೊಂದರೆಯಾಗಿದೆ ಎಂದು ದೂರಿದರು.ಜೊತೆಗೆ ಮುಖ್ಯವಾಗಿ ರೈತರ ಜಮೀನುಗಳಿಗೆ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ ಇದರಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಬೇಕು ಅಲ್ಲದೇ ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕು ಜೊತೆಗೆ ರೈತರಿಗೆ ಬರ ಪರಿಹಾರದ ಹಣ ಬರುತ್ತಿಲ್ಲ ಹಾಗಾಗಿ ಆದಷ್ಟು ಬೇಗ ಈ ಬಗ್ಗೆ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಕೃಷಿ ಇಲಾಖೆಯಲ್ಲಿ ಅನೇಕ ಕಾರ್ಯಕ್ರಮಗಳಿದ್ದು ಅದರ ಪ್ರಯೋಜನ ರೈತರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ ಇದರಿಂದ ಸರಿಯಾದ ಮಾಹಿತಿ ನೀಡಿ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.

ಬಾಲ್ಯ ವಿವಾಹ ನಿಲ್ಲಿಸಿ : ತಾಲೂಕಿನಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ನಡೆಯುತ್ತಿದ್ದೂ ಸಾಧ್ಯವಾದಷ್ಟು ಎಲ್ಲರೂ ಸೇರಿ ಬಾಲ್ಯ ವಿವಾಹ ನಿಲ್ಲಿಸುವ ಪ್ರಯತ್ನ ಮಾಡೋಣ ಎಂದು ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮನವಿ ಮಾತನಾಡಿದರು.

ತೋಟಗಾರಿಕೆ ಇಲಾಖೆಯ ಕಾರ್ಯಕ್ರಮದ ಬಗ್ಗೆ ತರಬೇತಿ ನೀಡಿ : ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ಅನೇಕ ರೀತಿಯಲ್ಲಿ ಕಾರ್ಯಕ್ರಮಗಳಿದ್ದು ಇದು ನಮ್ಮ ರೈತರಿಗೆ ಸರಿಯಾದ ಮಾಹಿತಿ ಇಲ್ಲ ಮಾಹಿತಿ ಕೊರತೆಯಿಂದಾಗಿ ನಮ್ಮ ರೈತರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ ಹಾಗಾಗಿ ಮುಂದಿನ ದಿನಗಳಲ್ಲಿ ತೋಟಗಾರಿಕೆಯ ಇಲಾಖೆಯಲ್ಲಿ ರೈತರಿಗೆ ಇರುವ ಕಾರ್ಯಕ್ರಮಗಳ ಬಗ್ಗೆ ತರಬೇತಿ ನೀಡಿ ಎಂದು ಮನವಿ ಮಾಡಿದರು.

ಆಂಬುಲೆನ್ಸ್ ನೀಡಿ : ಹನೂರು ತಾಲೂಕಿನಲ್ಲಿ ಕೇವಲ 3 ಆಂಬುಲೆನ್ಸ್ ಗಳು ಕೆಲಸ ಮಾಡುತ್ತಿದ್ದೂ ಅದರಲ್ಲೂ ಕೇವಲ 2 ಆಂಬುಲೆನ್ಸ್ ಗಳು ಮಾತ್ರ ಕೆಲಸ ನಿರ್ವಹಿಸುತ್ತಿದ್ದು ಉಳಿದಂತೆ ವಿವಿದೆಡೆ ಆಂಬುಲೆನ್ಸ್ ಗಳ ಕೊರೆತೆ ಎದ್ದು ಕಾಡುತ್ತಿದೆ ಹಾಗಾಗಿ ಆಂಬುಲೆನ್ಸ್ ಗಳ ಕೊರತೆ ನೀಗಿಸಬೇಕು ಆಸ್ಪತ್ರೆಗಳಲ್ಲಿ ವೈದ್ಯರು ಉಳಿದು ಚಿಕಿತ್ಸೆ ನೀಡುವಂತಾಗಬೇಕು ಎಂದು ರೈತರು ಆಗ್ರಹ ಮಾಡಿದರು.

ಅಲ್ಲದೇ ತಾಲೂಕಿನಲ್ಲಿ ಕೆಲವೆಡೆ ಶಾಲಾ ಶಿಕ್ಷಕರು ಸಮಯಕ್ಕೆ ಮುಂಚಿತವಾಗಿ ಶಾಲೆ ಬಿಟ್ಟು ಬರುತ್ತಿದ್ದಾರೆ ಹಾಗಾಗಿ ಅಂತಹ ಕಡೆ ನಿಗಾ ವಹಿಸಿ ಜೊತೆಗೆ ಅಂಗನವಾಡಿ ಕೇಂದ್ರಗಳಲ್ಲಿ ಹುಳು ಮಿಶ್ರಿತ ಆಹಾರ ಕೊಡುತ್ತಿದ್ದೂ ಅದರ ಬಗ್ಗೆ ಸಂಬಂಧ ಪಟ್ಟವರು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗೃಹಲಕ್ಷ್ಮಿ ಆತಂಕ ಬಿಡಿ : ಹನೂರು ತಾಲೂಕಿನಲ್ಲಿ 46146 ಫಲಾನುಭವಿಗಳು ಈಗಾಗಲೇ ನೋಂದಣಿ ಮಾಡಿದ್ದು ಅವರಿಗೆ ಗೃಹಲಕ್ಷ್ಮಿ ಹಣ ತಲುಪುತ್ತಿದೆ ಉಳಿದಂತೆ 300 ಜನ ಫಲಾನುಭವಿಗಳಿಗೆ ನಾನಾ ಕಾರಣಗಳಿಂದ ತಲುಪಿಲ್ಲ ಅವರಿಗೆ ಈಗಾಗಲೇ ಕರೆ ಮಾಡಿ ತಿಳಿಸಿದ್ದು ಕೆ ವೈ ಸಿ ಮಾಡಿಸಲು ತಿಳಿಸಲಾಗಿದೆ.ಜೊತೆಗೆ ಮುಖ್ಯವಾಗಿ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಿಡಿಪಿಒ ನಂಜಮಣಿ ಹೇಳಿದರು.

ಇದೆ ಸಂದರ್ಭದಲ್ಲಿ ಅಧಿಕಾರಿಗಳಾದ ತಹಸೀಲ್ದಾರ್ ವೈ ಕೆ ಗುರುಪ್ರಸಾದ್, ತಾಲೋಕು ಪಂಚಾಯಿತಿ ಇ ಒ ಉಮೇಶ್, ಸಿ ಡಿ ಪಿ ಒ ನಂಜಮಣಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದ್ರಮ್ಮ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ವಿನುತಾ, ತಾಲೂಕು ವೈದ್ಯಾಧಿಕಾರಿ ಡಾ ಪ್ರಕಾಶ್,ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಪೋಲಿಸ್ ಇಲಾಖೆಯ ಅಧಿಕಾರಿಗಳು, ಸೇರಿದಂತೆ ಹನೂರು ತಾಲೂಕಿನ ರೈತ ಸಂಘಟನೆಯ ಮುಖಂಡರು ಹಾಗೂ ರೈತರು ಹಾಜರಿದ್ದರು .

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago