Indian Institute of Health Management Research to soon start courses in Artificial Intelligence and Data Science: Dr. S.D. Gupta
ಬೆಂಗಳೂರು, ಜೂ,29; ಭಾರತೀಯ ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆಯಲ್ಲಿ ಶೀಘ್ರ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ಕೋರ್ಸ್ ಗಳನ್ನು ಪ್ರಾರಂಭಿಸುವುದಾಗಿ ಐಐಎಚ್ ಎಂಆರ್ ಸೊಸೈಟಿಯ ಅಧ್ಯಕ್ಷ ಡಾ.ಎಸ್.ಡಿ.ಗುಪ್ತ ಹೇಳಿದ್ದಾರೆ.
ಭಾರತೀಯ ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆ – ಐಐಎಚ್ಎಂಆರ್ ನ 2024-2026 ಬ್ಯಾಚ್ನ ಸ್ನಾತಕೋತ್ತರ ಡಿಪ್ಲೊಮಾ ಇನ್ ಮ್ಯಾನೇಜ್‌ಮೆಂಟ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗಾವಕಾಶಗಳ ಬಗ್ಗೆ ಚಿಂತಿಸದೆ ಕಲಿಕೆಯತ್ತ ವಿದ್ಯಾರ್ಥಿಗಳು ಗಮನಹರಿಸಬೇಕು. ಆರೋಗ್ಯ ರಕ್ಷಣೆಯಲ್ಲಿ ಹೆಚ್ಚುತ್ತಿರುವ ಮಾಹಿತಿ ತಂತ್ರಜ್ಞಾನ ಆರೋಗ್ಯ ಕ್ಷೇತ್ರವನ್ನು ಬದಲಿಸಿದೆ. ಬೆಂಗಳೂರಿನ ಐಐಎಚ್‌ಎಂಆರ್ ನಲ್ಲಿ ಎಐಸಿಟಿಇ-ಅನುಮೋದಿತ ಪಿಜಿಡಿಎಂ ಕಾರ್ಯಕ್ರಮದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ಕೋರ್ಸ್ ಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದರು.
ಐಐಎಚ್ಎಂಆರ್ ನಿರ್ದೇಶಕರಾದ ಡಾ.ಉಷಾ ಮಂಜುನಾಥ್ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ದಿಮತ್ತೆ ಮತ್ತು ಡಿಜಿಟಲ್ ತಂತ್ರಜ್ಞಾನ ವ್ಯಾಪಕವಾಗಿ ಬೆಳವಣಿಗೆಯಾಗುತ್ತಿದ್ದು, ಆಧುನಿಕ ಸವಾಲಯಗಳಿಗೆ ಸೂಕ್ತ ರೀತಿಯಲ್ಲಿ ವಿದ್ಯಾರ್ಥಿಗಳು ಸಜ್ಜಾಗಬೇಕು. ಆಧುನಿಕ ಜಗತ್ತಿಗೆ ಅನುಗುಣವಾಗಿ ಆಸ್ಪತ್ರೆ ನಿರ್ವಹಣೆ, ಆರೋಗ್ಯ ನಿರ್ವಹಣೆ, ಆರೋಗ್ಯ ವಲಯದಲ್ಲಿ ಮಾಹಿತಿ ತಂತ್ರಜ್ಞಾನ ನಿರ್ವಹಣೆ ಮತ್ತು ಔಷಧೀಯ ನಿರ್ವಹಣೆ ಕೋರ್ಸ್ ಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಮನೀಶ್ ತ್ರಿವೇದಿ ಮಾತನಾಡಿ, ಆರೋಗ್ಯ ಉದ್ಯಮದಲ್ಲಿ ದತ್ತಾಂಶ ದೊಡ್ಡ ಪ್ರಮಾಣದಲ್ಲಿ ಬೆಳವಣಿಗೆಯಾಗುತ್ತಿದೆ. ದತ್ತಾಂಶವನ್ನು ವಿಶ್ಲೇಷಿಸಲು ಮತ್ತು ಅರ್ಥೈಸಲು ಕೃತಕ ಬುದ್ಧಿಮತ್ತೆಯ ಅಗತ್ಯದ ಬಗ್ಗೆ ಒತ್ತಿ ಹೇಳಿದರು.
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಹ ಪ್ರಾಧ್ಯಾಪಕ ಡಾ. ಅಲೆನ್ ಪಿ. ಉಗರಗೋಳ್ ಮಾತನಾಡಿ, ವಿದ್ಯಾರ್ಥಿಗಳು ಪರಸ್ಪರ ಬೆಳವಣಿಗೆ ಮತ್ತು ನಿರಂತರ ಸುಧಾರಣೆಯ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದರು.
ಪ್ರಾಧ್ಯಾಪಕರಾದ ಡಾ. ಅಮಿತಾ ಮುಖೋಪಾಧ್ಯಾಯ, ಸಹ ಪ್ರಾಧ್ಯಾಪಕ ಡಾ. ಜ್ಞಾನ್ ಚಂದ್ರ ಕಶ್ಯಪ್ ಮತ್ತಿತರರು ಉಪಸ್ಥಿತದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…