Breaking News

ವಿದ್ಯಾರ್ಥಿಗಳ ಜೀವನ ಚಿನ್ನದಂತ ಜೀವನ ಸಮಯಅಮೂಲ್ಯವಾದದ್ದು


ವರದಿ : ಬಂಗಾರಪ್ಪ .ಸಿ
ಹನೂರು: ವಿದ್ಯಾರ್ಥಿಗಳ ಜೀವನ ಅಮೂಲ್ಯವಾದ ಸಮಯವಾಗಿರುತ್ತದೆ ,ವಿದ್ಯಾಭ್ಯಾಸದ ಸಮಯದಲ್ಲಿ ಯಾವುದೇ ದುಷ್ಟ ಚಟಗಳಿಗೆ ಬಲಿಯಾಗದೆ ತಮ್ಮನ್ನು ಪೋಷಣೆ ಮಾಡುತ್ತಿರುವ ತಂದೆ ತಾಯಿಗಳ ಆಶಯಂತೆ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ,ಕಿವಿಮಾತು ಹೇಳಿದರು .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹನೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು
ಹಿಂದೆ ವಿದ್ಯಾರ್ಥಿಗಳು ತಮ್ಮ ಬಾಲ್ಯದ ದಿನಗಳನ್ನು ವಿದ್ಯಾಭ್ಯಾಸಕ್ಕಾಗಿ ಮೀಸಲಿಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದಿಗಿಂತ ಹೆಚ್ಚಾಗಿ ಮೋಜು ಮಸ್ತಿಗಾಗಿ ಸಮಯ ಮೀಸಲಿಡುತ್ತಾರೆ. ಇದರಿಂದ ಸಮಾಜ ಮತ್ತು ದೇಶಕ್ಕೆ ಯಾವುದೇ ಕೊಡುಗೆ ನೀಡಲು ಸಾಧ್ಯವಾಗುವುದಿಲ್ಲ, ತಮ್ಮ ಅಮೂಲ್ಯವಾದ ಸಮಯವನ್ನು ಓದಿಗೆ ಮೀಸಲಿಟ್ಟು ಉತ್ತಮ ಶಿಕ್ಷಣ ಪಡೆದರೆ ನೀವು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯುತ್ತೀರಾ, ವಿದ್ಯಾಭ್ಯಾಸ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಉತ್ತಮ ವಿದ್ಯಾರ್ಥಿಗಳಾಗಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ
ಎ ಎಸ್ ಐ ಕೃಷ್ಣ ಮಾತನಾಡಿ 18 ವರ್ಷ ಒಳಪಟ್ಟ ಮಕ್ಕಳು ವಾಹನ ಚಲಾಯಿಸುತ್ತಿರುವುದರಿಂದ ರಾಜ್ಯದಲ್ಲಿ ಪೊಷಕರಿಗೆ ದಂಡ ವಿಧಿಸುತ್ತಿರುವುದರಿಂದ ಪೊಷಕರು ಮುನ್ನೆಚ್ಚರಿಕೆ ಕ್ರಮವಾಗಿ ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ಅವಕಾಶ ನೀಡದಂತೆ ನೋಡಿಕೊಳ್ಳಬೇಕು ಎಂದರು.

ಬಾಲ್ಯ ವಿವಾಹದ ಬಗ್ಗೆ ತಿಳಿವಳಿಕೆ .

ಮಹಿಳಾ ಪೋಲಿಸ್ ಪೇದೆ ಚೈತ್ರ ಮಾತನಾಡಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಹಕ್ಕುಗಳ ರಕ್ಷಣೆ, ಲೈಂಗಿಕ ದೌರ್ಜನ್ಯ, ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ರಕ್ಷಣೆ, ಪೊಲೀಸ್ ಇಲಾಖೆಯ ಕಾರ್ಯಚಟುವಟಿಕೆ, ವೈಯರ್‌ಲೆಸ್ ವಾಕಿಟಾಕಿ, ಗನ್, ಬಂದೂಕು, ರೈಫಲ್ ಎಸ್‌ಎಲ್‌ಆರ್ ರೈಫಲ್, ಪರೇಡ್ ಸೇರಿದಂತೆ ಠಾಣೆಯ ಕಾರ್ಯ ವೈಖರಿಗಳ ಬಗ್ಗೆ ಮಕ್ಕಳಿಗೆ ಸಮರ್ಪಕ ಮಾಹಿತಿ ನೀಡಿದರು.

ಇದೇ ಸಮಯದಲ್ಲಿ ಠಾಣಾಧಿಕಾರಿಗಳಾದ ಮುಖ್ಯಪೇದೆ ಶಿವಮೂರ್ತಿ, ಮಹಿಳಾಪೇದೆ ರಂಜಿತ, ಶಿಕ್ಷಕರಾದ ಸಬಾನ ಬೇಗಮ್, ಮರೀಶ್, ಪ್ರೇಮ್ ಕುಮಾರ್ ಮಹೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಸಂಭ್ರಮ.

Sharannavarathri celebrations for Shri Sharadambrama ಗಂಗಾವತಿ: ಸರ್ವ ಜನಾಂಗದ ಮಹಿಳೆಯರ ಪಾಲ್ಗೊಳ್ಳುವಿಕೆಯಿಂದಾಗಿ ಶಾರದಾ ಶರನ್ನವರಾತ್ರಿಯ ಪ್ರಥಮ ದಿನದಂದು ದಾಖಲೆಯ …

Leave a Reply

Your email address will not be published. Required fields are marked *