
ಬೆಂಗಳೂರು, ಜು, 6; ವಿದ್ಯಾರ್ಥಿ ಸಮುದಾಯ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಚಲನಚಿತ್ರ ನಿರ್ಮಾಪಕ ಅರುಣ ಅಮುಕ್ತ ಕರೆ ನೀಡಿದ್ದಾರೆ.
ಎನ್.ಎಮ್.ಕೆ.ಆರ್.ವಿ ಕಾಲೇಜಿನ ಮಂಗಳ ಮಂಟಪದಲ್ಲಿ ಎಸ್.ಎಸ್.ಎಮ್.ಆರ್. ಕಾಲೇಜಿನ 24 ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಬದುಕಿನ ಪಾಠ ಕಲಿಯಬೇಕು ಎಂದರು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಷ್ಣುಭರತ್ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ಗೀತಾ ಆರ್. ಸಿಬ್ಬಂದಿ ಮಂಡಳಿ ಕಾರ್ಯದರ್ಶಿ ಪ್ರೊ.ಶಾಂತಿ ಕ್ರಷ್ಣ, ಪ್ರೊ.ಶರವಣ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.