Breaking News

ಗಂಗಾವತಿಯ ಹಿರಿಯ ಪತ್ರಕರ್ತ ಕೆ.ನಿಂಗಜ್ಜ. ಮಾಧ್ಯಮ ಅಕಾಡೆಮಿ ಸದಸ್ಯರಾಗಿ‌ ನೇಮಿಸಿ ಸರ್ಕಾರ ಆದೇಶ

ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

ಬೆಂಗಳೂರು : ‌ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.

ಜಾಹೀರಾತು

ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು.

ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದ್ದು. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ.

ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.