Breaking News

ವಿದ್ಯಾವಂತರಿಂದಲೇ ಹೆಚ್ಚುತ್ತಿದೆ ಭ್ರಷ್ಟಾಚಾರ : ಜಸ್ಟೀಸ್ ಸಂತೋಷ್ ಹಗಡೆ ಕಳವಳ

ವಿದ್ಯಾ ಸೌಧ ಗ್ರೂಪ್ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು; ವಿದ್ಯಾವಂತರಿಂದಲೇ ಇಂದು ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಇದು ಅತ್ಯಂತ ಕಳವಳಕಾರಿ ಸಂಗತಿ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳು ವಿದ್ಯೆಯ ಜೊತೆ ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಬ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಯುವ ಸಮೂಹ ಮುಂದಾಗಬೇಕು ಎಂದು ಕರೆ ನೀಡಿದರು.
ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ “ವಿದ್ಯಾ ಸೌಧ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ – ವಿ.ಎಸ್.ಜಿ.ಐ.” ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಉದ್ಘಾಟಿಸಿ 10 ಮತ್ತು 12 ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಿ ಮಾತನಾಡಿದ ಅವರು,
ಎಲ್ಲಾ ರೋಗಗಳಿಗೂ ಮದ್ದಿದೆ. ಆದರೆ ದುರಾಸೆಗೆ ಮದ್ದಿಲ್ಲ. ಭ್ರಷ್ಟಾಚಾರಿಗಳಿಗೆ ಕಾನೂನಿನ ಹೆದರಿಕೆ ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ. ನ್ಯಾಯಾಲಯದಲ್ಲಿ ಒಂದು ಪ್ರಕರಣ ಇತ್ಯರ್ಥವಾಗಲು 10 ರಿಂದ 15 ವರ್ಷಗಳು ಬೇಕಾಗುತ್ತದೆ. ಸಮಾಜದಲ್ಲಿ ಇದೀಗ ಬದಲಾಣೆ ತುರ್ತು ಅಗತ್ಯ ಎಂದರು.
ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಮಾತನಾಡಿ, ಶಿಕ್ಷಣ ಕ್ಷೇತ್ರ ಇಂದು ಅಗಾಧವಾಗಿ ಬೆಳವಣಿಗೆಯಾಗುತ್ತಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅನನ್ಯ ಎಂದು ಹೇಳಿದರು.
ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ. ಗೋವಿಂದ ರಾಜ್, ಸಾಲುಮರದ ತಿಮ್ಮಕ್ಕ, ಥಟ್ ಅಂತ ಹೇಳಿ ಖ್ಯಾತಿಯ ಡಾ. ನಾ. ಸೋಮೇಶ್ವರ ಮತ್ತಿತರ ಗಣ್ಯರನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮಂಜೇಗೌಡ ಗೌರವಿಸಿದರು.
ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಪವನ್ ಮಂಜೇಗೌಡ ಮತ್ತಿತತರೆ ಗಣ್ಯರು ಉಪಸ್ಥಿತರಿದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *