ವರದಿ : ಬಂಗಾರಪ್ಪ .ಸಿ .
ಹನೂರು : ಪ್ರತಿ ಗ್ರಾಮದಲ್ಲಿಯು ಸಹ ಅಧಿಕಾರಿಗಳ ಹಾಗೂ ಸ್ಥಳಿಯ ಗ್ರಾಮಸ್ಥರ ಸಹಯೋಗದೊಂದಿಗೆ ಸಮಸ್ಯೆಗಳನ್ನು ಬಗೆಹರಿಸಬೇಂದು ಶಾಸಕರಾದ ಎಮ್ ಆರ್ ಮಂಜುನಾಥ್ ಸಲಹೆ ನೀಡಿದರು .
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಜೆಜೆಎಂ ಪ್ರಗತಿಪರಶೀಲನ ಸಭೆಯು ಶಾಸಕ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಜರುಗಿತು.
ಸಭೆಯಲ್ಲಿ ಮಾತನಾಡಿದ ಅವರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ನಿಗದಿಗೊಳಿಸಿರುವ ಅವಧಿ ಒಳಗೆ ಪೂರ್ಣಗೊಳಿಸಿ ಜನರಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ತಲುಪಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಕಾಡಂಚಿನ ಗ್ರಾಗಳಾದ ದೊಡ್ಡಾನೆ, ತೋಕೆರೆ ಕೊಕ್ಕಬರೆ ಹಾಗೂ ಇನ್ನಿತರ ಕಾಡಂಚಿನ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಬಿವೃದ್ಧಿ ಹಾಗೂ ವಿದ್ಯುತ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು, ಪೂರ್ಣಗೊಳ್ಳದ ಕಾಮಗಾರಿಯಗಳ ಮಾಹಿತಿಯನ್ನು ನಮಗೆ ಒದಗಿಸಬೇಕು ಎಂದು ತಾಕೀತು ಮಾಡಿದರು. ಇದೇ ವೇಳೆ 6 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು ಅಭಾವ ಉಂಟಾಗದಂತೆ ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸಿ ಸಮಸ್ಯೆಯನ್ನು ತಲೆದೂರದಂತೆ ಕ್ರಮಕೈಗೊಳ್ಳಬೇಕು, ಎಂದರು .
ಇದೇ ಸಮಯದಲ್ಲಿ
ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಇದುವರೆಗೆ ಯಾವುದೇ ರೀತಿಯಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾಗಿಲ್ಲ ಇದೇ ನಿಟ್ಟಿನಲ್ಲಿ ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ಇದಲ್ಲದೆ ಡಿಎಚ್ಒ ರವರ ಜೊತೆ ದೂರವಾಣಿ ಮುಖಾಂತರ ಚರ್ಚೆ ನಡೆಸಿದ್ದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾದ್ಯಮದವರಿಗೆ ತಿಳಿಸಿದರು.
ಇದೇ
ಸಂದರ್ಭದಲ್ಲಿ ಜಲಜೀವನ್ ಯೋಜನೆಯ ಎ.ಇಇ ಹರೀಶ್, ಜೆ.ಇ ಮಹೇಶ್, ಹಾಗೂ ಪೂರ್ಣಿಮಾ,ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಪ್ರತಿಹಳ್ಳಿಗೂಕುಟಿಯುವ ನೀರು ಸರಬರಾಜು ಉತ್ತಮವಾಗಿರಲಿ : ಶಾಸಕರಾದ ಎಮ್ ಆರ್ ಮಂಜುನಾಥ್ ಸಲಹೆ .
ಜಾಹೀರಾತು