Request to cancel NPS and implement OPS
Klyanasiri News, ಕೊಪ್ಪಳ: (ಕನಕಗಿರಿ ) ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ತಾಲೂಕು ಘಟಕ ಕನಕಗಿರಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ತಹಶೀಲ್ದಾರರಿಗೆ 7ನೇ ವೇತನ ಆಯೋಗದ ಯಥಾವತ್ ಜಾರಿ, NPS ಹೋಗಲಾಡಿಸಿ OPS ಜಾರಿ ಮತ್ತು ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವಂತೆ ಮನವಿ ಪತ್ರ ನೀಡಲಾಯಿತು.
ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕನಕಗಿರಿ ಮತ್ತು ಕಾರಟಗಿ ತಾಲೂಕು ಘಟಕಗಳ ಪದಾಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ, ಜಿಲ್ಲಾ ಸಚಿವ ಶಿವರಾಜ ತಂಗಡಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಎರಡೂ ತಾಲೂಕು ಘಟಕಗಳ ಪದಾಧಿ ಕಾರಿಗಳು ಕಾರಟಗಿ ಪಟ್ಟಣದ ಸಚಿವ ಶಿವರಾಜ ತಂಗಡಗಿ ಅವರ ಗೃಹ ಕಚೇರಿಗೆ ತೆರಳಿ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ದಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು & ಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ .
ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದಿಂದ ಒತ್ತಾಯಿಸಿದರು.
ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್ ಮೆಂಟ್ ಸೌಲಭ್ಯವನ್ನು ಕನಿಷ್ಠ ಶೇ. 27.50%ಕ್ಕೆ ಹೆಚ್ಚಿಸಿ ಕಾಲ್ಪನಿಕವಾಗಿ ದಿನಾಂಕ: 01-07-2022 ರಿಂದ ಅನ್ವಯವಾಗುವಂತೆ ವೇತನ ನಿಗಧಿಪಡಿಸಿ, ದಿ: 1-4-2024ರಿಂದ ಆರ್ಥಿಕ ಸೌಲಭ್ಯವನ್ನು ನೀಡಿಲು ಮತ್ತು ಎನ್.ಪಿ.ಎಸ್. ರದ್ದುಪಡಿಸಿ ಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಿಗಿ ಅವರಿಗೆ ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ ಕನಕಗಿರಿ ತಾಲೂಕಿನ ಅಧ್ಯಕ್ಷರಾದ ವಿ ಮಧುಸೂದನ್. ಮಲ್ಲೇಶಪ್ಪ, ಸಿದ್ದಲಿಂಗಪ್ಪ, ಉಪಾಧ್ಯಕ್ಷರು, ಸಂತೋಷ್ ಕ್ರೀಡಾಕಾರ್ದರ್ಶಿ, ಶಿವಾನಂದ್ ಮಾಧ್ಯಮ ಸಲಹೆಗಾರರು, ವೆಂಕೋಬ್ ಪೂಜಾರಿ ಸಂಘಟನಾ ಕಾರ್ಯದರ್ಶಿ ಸಂಗಮೇಶ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ತಿಪ್ಪೇಶ ಸಂಘಟನಾ ಕಾರ್ಯದರ್ಶಿ,ಪ್ರಭಾಕರ್ ರೆಡ್ಡಿ, ಶಿವಕುಮಾರ್, ಪರಸಪ್ಪವರ ಪೇಟೆ ನಿವೃತ್ತ ನೌಕರ ಸಂಘದ ಅಧ್ಯಕ್ಷರಾದ ಮಹಾಂತೇಶ್ ತಾಡಪತ್ರಿ,ಹನುಮಾನ ಗೌಡ, ಅಶೋಕ, ಬಸವರಾಜ್ ಸಜ್ಜನ್, ನಾಗೇಶ್ ಸಜ್ಜನ್, ಮಲ್ಲಪ್ಪ ಗೋಪಾಲಿ, ಪದಾಧಿಕಾರಿಗಳು ನಿರ್ದೇಶಕರು ನಾಮನಿರ್ದೇಶಿತ ಸದಸ್ಯರು, ನೌಕರರು, ನಿವೃತ್ತ ನೌಕರರು ಭಾಗವಹಿಸಿದ್ದರು.