Breaking News

ವಿಟಿಯು 24ನೇ ವಾರ್ಷಿಕ ಘಟಿಕೋತ್ಸವ ಭಾಗ -1ತಂತ್ರಜ್ಞಾನ ಬೆಳವಣಿಗೆಯಿಂದ ವಿಶ್ವದಲ್ಲಿಭಾರತಮುಂಚೂಣಿ ರಾಷ್ಟ್ರವಾಗಲಿದೆ: ರಾಜ್ಯಪಾಲಥಾವರಚಂದ್ ಗೆಹ್ಲೋಟ್

VTU 24th Annual Convocation Part-1 India will become a leading country in the world due to technological development: Governor Thawarchand Gehlot

ಜಾಹೀರಾತು


ಬೆಳಗಾವಿ, ಜು.18(ಕರ್ನಾಟಕ ವಾರ್ತೆ): ಭಾರತದಲ್ಲಿ ಆರ್ಥಿಕ ಅಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ, ಕೈಗಾರಿಕೀಕರಣ, ಕೃಷಿ ಕ್ಷೇತ್ರದ ಸುಧಾರಣೆಗಳು, ಶಿಕ್ಷಣ ಮತ್ತು ಆಧುನೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ. ಪ್ರಸ್ತುತ ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವು ಸಕ್ರಿಯ ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕರೆ ನೀಡಿದರು.


ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಗುರುವಾರ (ಜು.18) ನಡೆದ ವಿಟಿಯು 24ನೇ ಘಟಿಕೋತ್ಸವ ಭಾಗ -1 ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತೀಯ ಆರ್ಥಿಕತೆಯ ಅಭಿವೃದ್ಧಿಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಪ್ರಮುಖ ಕೊಡುಗೆಯನ್ನು ಹೊಂದಿವೆ. ಪ್ರಸ್ತುತ ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅದನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಕ್ರಿಯ ಪ್ರಯತ್ನಗಳು ನಡೆಯಬೇಕು ಎಂದು ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಕೊಡುಗೆ:
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅದ್ಭುತ ಸಾಧನೆಗಳನ್ನು ಸಾಧಿಸುವ ಮೂಲಕ ಭಾರತವು ಬಾಹ್ಯಾಕಾಶ ಸಂಶೋಧನೆ, ಚಂದ್ರಯಾನ ಮಿಷನ್, ಮಂಗಳಯಾನ ಮತ್ತು ಇಂಟರ್ನೆಟ್ ತಂತ್ರಜ್ಞಾನ ಕ್ಷೇತ್ರದಲ್ಲೂ ಹೊಸ ಗುರುತನ್ನು ಮಾಡಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಪ್ರಗತಿಯಿಂದಾಗಿ ಸ್ವಾವಲಂಬಿ ಭಾರತವು ಪ್ರಪಂಚದಾದ್ಯಂತ ತನ್ನ ಖ್ಯಾತಿಯನ್ನು ಹೆಚ್ಚಿಸಿದೆ. ಒನ್ ಇಂಡಿಯಾ, ಅತ್ಯುತ್ತಮ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಯನ್ನು ಸಾಧಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಮುಖ್ಯವಾಗಿದೆ ಎಂದು ಅವರು ತಿಳಿಸಿದರು.
ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ನುರಿತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮೂಲಕ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸುವ ಹಾಗೂ ಜನರ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ತಾಂತ್ರಿಕ ಶಿಕ್ಷಣವು ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ತಂತ್ರಜ್ಞಾನವು ನಾವು ಊಹಿಸುವುದಕ್ಕಿಂತ ವೇಗವಾಗಿ ಬದಲಾಗುತ್ತಿದೆ. ಆದ್ದರಿಂದ ನಮ್ಮ ಸಂಶೋಧಕರು, ವಿಜ್ಞಾನಿಗಳು ಮತ್ತು ತಜ್ಞರು ಪ್ರತಿಯೊಂದು ಕ್ಷೇತ್ರವನ್ನು ಮುನ್ನೆಚ್ಚರಿಕೆ ವಹಿಸಬೇಕು.
ಉತ್ಪಾದನೆ ಮತ್ತು ಉದ್ಯಮಶೀಲತೆಯ ಯುಗವಾಗಿದೆ ಮತ್ತು ನಮ್ಮ ಯುವಕರು ಕಾರ್ಯಕ್ಷಮತೆ ಮತ್ತು ಸುಧಾರಣೆಯ ಚಾಲಕರಾಗಲು ಸಾಮರ್ಥ್ಯ ಮತ್ತು ನಿರ್ಣಯವನ್ನು ಹೊಂದಿದ್ದಾರೆ. ಸ್ವಾಮಿ ವಿವೇಕಾನಂದರು ಹೇಳಿದಂತೆ – “ಎದ್ದೇಳಿ, ಎಚ್ಚರಗೊಳ್ಳಿರಿ ಮತ್ತು ಗುರಿಯನ್ನು ಸಾಧಿಸುವವರೆಗೆ ನಿಲ್ಲಬೇಡಿ”, ಈ ಸಂಕಲ್ಪದೊಂದಿಗೆ ನಮ್ಮ ಯುವಕರು ದೇಶದ ಅಭಿವೃದ್ಧಿಯಲ್ಲಿ ತಮ್ಮ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ:
ಪ್ರಾಚೀನ ಕಾಲದಲ್ಲಿ ನಮ್ಮ ಭಾರತ ದೇಶವನ್ನು ವಿಶ್ವ ಗುರು ಎಂದು ಕರೆಯಲಾಗುತ್ತಿತ್ತು. ನಳಂದ, ತಕ್ಷಶಿಲಾ ಮತ್ತು ವಿಕ್ರಮಶಿಲಾ ಮುಂತಾದ ವಿಶ್ವದರ್ಜೆಯ ಶಿಕ್ಷಣ ಸಂಸ್ಥೆಗಳಿದ್ದವು. ನಮ್ಮ ಸಂಸ್ಕೃತಿಯು ಯಾವಾಗಲೂ ವಿಶ್ವ ಭ್ರಾತೃತ್ವ ಮತ್ತು ವಿಶ್ವ ಶಾಂತಿಗೆ ಸಮರ್ಪಿತವಾಗಿದೆ. ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ದೇಶ ಮತ್ತು ಪ್ರಪಂಚದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನೀರು, ಅರಣ್ಯ ಮತ್ತು ವಾಯು ಸಂರಕ್ಷಣೆಗೆ ಶ್ರಮಿಸುವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೇಳಿದರು.
ಬೆಂಗಳೂರು ಭಾರತೀಯ ವಿಜ್ಣಾನ ಮಂದಿರ (ಐ.ಐ.ಎಸ್ಸಿ) ನಿರ್ದೆಶಕರಾದ ಪ್ರೋ.ಗೋವಿಂದನ್ ರಂಗರಾಜನ್ ಮಾತನಾಡಿ
ಆರ್ಟಿಫಿಷಿಯಲ್ ಇಂಟ್ಲಿಜನ್ಸಿ ಬರುವ ದಿನಗಳಲ್ಲಿ ಕ್ರಾಂತಿ ಮಾಡಲಿದೆ. ವಿದ್ಯಾರ್ಥಿಗಳು ಶಿಕ್ಷಣ ಮುಗಿದ ನಂತರ ಹೇಗೆ ಸಾಮಾಜಿಕ ಜೀವನದಲ್ಲಿ ತೊಡಗಿಕೊಳ್ಳಬೇಕು ಎಂಬುದರ ಬಗ್ಗೆ ಯೋಚಿಸಬೇಕು. ತಾಂತ್ರಿಕ ಕಾಲೇಜಿನ ಎಲ್ಲ ವಿಭಾಗಗಳ ವಿದ್ಯಾರ್ಥಿಗಳು ತಂತ್ರಜ್ಞಾನ ಬೆಳವಣಿಗೆಯ ಪ್ರಯೋಜನ ಪಡೆದುಕೊಳ್ಳಬೇಕು. ಭವಿಷ್ಯದಲ್ಲಿ ಎಐ ನಿಂದ ಸಾಕಷ್ಟು ಬದಲಾವಣೆ ಆಗಲಿದೆ ಎಂದರು.
ಕಲಿಕೆ ನಿರಂತರ:
ಚಿಕ್ಕಬಳ್ಳಾಪುರ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಮಾತನಾಡಿ ಈ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದು ಹೆಮ್ಮಯ ವಿಷಯವಾಗಿದೆ. ಸಮಾಜದಲ್ಲಿ ನಾವು ತರುವ ಉನ್ನತ ಬದಲಾವಣೆಗಳು ಮುಂದಿನ ಪೀಳಿಗೆಗೆ ದಾರಿ ಮಾಡಿ ಕೊಡುತ್ತವೆ. ಸರ್ಕಾರ, ಸಮಾಜ, ಸಂಸ್ಥೆಗಳು ದೇಶದ ಆಧಾರ ಸ್ಥಂಬವಾಗಿವೆ.
ನಿರಂತರ ಕಲಿಕೆ, ಅಧ್ಯಯನಗಳ ಮೂಲಕ ಜೀವನದಲ್ಲಿ ಬರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ತಿಳಿಸಿದರು.
ಬೆಂಗಳೂರು ಇಂಟರನ್ಯಾಷನಲ್ ಏರ್ ಪೋರ್ಟ್ ಲೀ. (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹರಿ ಕೆ. ಮರಾರ್ ಮಾತನಾಡಿ
ವಿಶ್ವದಲ್ಲೇ ಭಾರತ ಉನ್ನತ ಸ್ಥಾನಕ್ಕೆ ಬರಲು ಇಂದಿನ ಪೀಳಿಗೆಯ ಪಾತ್ರ ಬಹಳಷ್ಟಿದೆ. ಯುವಕರು ತಮ್ಮ ಸಾಧನೆ ಮೂಲಕ ದೇಶದ ಹೆಸರನ್ನು ವಿಶ್ವದ ಮೂಲೆ ಮೂಲೆಗಳಲ್ಲಿ ಪಸರಿಸುವ ಕಾರ್ಯಕ್ಕೆ ಮುಂದಾಗಬೇಕು. ನಿಮ್ಮ ಜ್ಞಾನವನ್ನು ಶಿಕ್ಷಣದಲ್ಲಿ ಹೂಡಿಕೆ ಮಾಡಿ, ಎಲ್ಲ ಕ್ಷೇತ್ರಗಳಲ್ಲಿಯೂ ನಿರಂತರ ಸಂಪರ್ಕ ಹೊಂದಬೇಕು. ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ಬೆಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ:
ಚಿಕ್ಕಬಳ್ಳಾಪುರದ ಶ್ರೀ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಮಧುಸೂಧನ್ ಸಾಯಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಡಾ.ಎಸ್.ಸೊಮನಾಥ್, ಬೆಂಗಳೂರ ಇಂಟರನ್ಯಾಷನಲ್ ಏರ್ ಪೋರ್ಟ ಲಿ.ವ್ಯವಸ್ಥಾಪನಾ ನಿರ್ದೆಶಕರು ಹಾಗೂ ಸಿ.ಜ.ಓ ಆದ ಹರಿ ಕೆ ಮರಾರ್ ಅವರುಗಳಿಗೆ ಡಾಕ್ಟರ್ ಆಫ್ ಸೈನ್ಸ ಗೌರವ ಪದವಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೊಟ್ ಅವರು ಪ್ರದಾನ ಮಾಡಿದರು.
ಚಿನ್ನದ ಪದಕ ವಿಜೇತರು:
ಬೆಳಗಾವಿಯ ಕೆ.ಎಲ್.ಇ. ಡಾ. ಎಂ.ಎಸ್ ಶೇಷಗಿರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಾಜಿ ಕಾಲೇಜಿನ ವಿಧ್ಯಾರ್ಥಿ ಸಾಹಿಲ್ ಎಂ. ಸೋಮನಾಚೆ ಅವರಿಗೆ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 12 ಚಿನ್ನದ ಪದಕ, ಬೆಂಗಳೂರಿನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಜಿ.ವಿಷ್ಣು ಪ್ರಿಯಾ ಅವರಿಗೆ ಕಂಪ್ಯೂಟರ ಸೈನ್ಸ ಮತ್ತಿ ಇಂಜಿನಿಯರಿಂಗ್ ವಿಭಾಗದಲ್ಲಿ 10, ಬೆಂಗಳೂರಿನ ಎಸ್.ಜೆ.ಬಿ. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಾಜಿ ಕಾಲೇಜಿನ ರೇಷ್ಮಾ ಜಿ. ಅವರಿಗೆ ಎಲೆಕ್ಟಾçನಿಕ್ಸ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ 7, ಬೆಂಗಳೂರಿನ ಎಸ್.ಜೆ.ಬಿ. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಾಜಿ ಕಾಲೇಜಿನ ಮೋಹನಕುಮಾರ ಎಲ್ ಅವರಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ 7, ಬಳ್ಳಾರಿಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಹೃತಿಕಾ ಜಿ. ಅವರಿಗೆ ಎಲೆಕ್ಟಿçಕಲ್ಸ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ 7, ಬೆಂಗಳೂರಿನ ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಕೃತಿಕಾ ಸೆಂಥಿಲ್ ಅವರಿಗೆ ಮಾಹಿತಿ ವಿಜ್ಞಾನ ಮತ್ತು ವಿಂಜಿನಿಯರಿAಗ್ ವಿಭಾಗದಲ್ಲಿ 4, ಬೆಂಗಳೂರಿನ ಆರ್.ಎನ್.ಎಸ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಅನುಶ್ರೀ ಪಿ ಅವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ 4, ಕೆ.ಜಿ.ಎಫ್. ನ ಡಾ.ಟಿ.ತಿಮ್ಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಮಾಲತೇಶ ಎನ್ ಅವರಿಗೆ ಮೈನಿಂಗ್ ಇಂಜನಿಯರಿಂಗ್ ವಿಭಾಗದಲ್ಲಿ 2, ದಾವಣೆಗೆರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಜನನಿ ಡಿ ಅವರಿಗೆ ಬಯೋ-ಟೆಕ್ನಾಲಾಜಿ ಇಂಜಿನಿಯರಿಂಗ್ ವಿಭಾಗದಲ್ಲಿ 2 ಹಾಗೂ ಮಂಗಳೂರಿನ ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಸೌರವ ವಿ.ಇಂಗಲ್ ಅವರಿಗೆ 2 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್, ಕುಲಸಚಿವರಾದ ಬಿ.ಇ ರಂಗಸ್ವಾಮಿ, ಮೌಲ್ಯ ಮಾಪನ ಕುಲಸಚಿವರಾದ ಟಿ.ಎನ್ ಶ್ರೀನಿವಾಸ ಉಪಸ್ಥಿತರಿದ್ದರು. ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದರು.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.