Breaking News

ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ:ಡಾ. ಐ .ಪಿ ಗಡಾದ್ ಸಲಹೆ

Include vegetables and fruits in children’s daily diet:Dr. I.P. Gadad advises

ಜಾಹೀರಾತು

ಕುಂದಾಪುರ: ಜುಲೈ 19: ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಾಯಂದಿರಿಗೆ ಡಾ. ಐ .ಪಿ ಗಡಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ ಜಿಲ್ಲೆ ಇವರು ತಮ್ಮ ಉದ್ಘಾಟನಾ ನುಡಿಗಳಿಂದ ಮನವಿ ಮಾಡಿದರು.

ನಮ್ಮ ಪಿ.ಜಿ.ಡಿ.ಎಚ್.ಪಿ.ಇ 7ನೇ ತಂಡದ ಪ್ರಶಿಕ್ಷಣಾರ್ಥಿ ಶ್ರೀಮತಿ ವೃಂದಾ.ಬಿ.ತಾಮಸೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಅಪೌಷ್ಟಿಕತೆಯ ಕುರಿತು ಸಂಶೋಧನಾತ್ಮಕ ಅಧ್ಯಯನವನ್ನು ಮಾಡಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ತಾಯಂದಿರನ್ನು ಬೃಹತ್ ಮಹಾ ಮೇಳದ ಮೂಲಕ ಈ ಸಭಾಂಗಣದ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ರೋಟರಿ ಕ್ಲಬ್ ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಇಲಾಖೆ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಇವರೆಲ್ಲರಿಗೂ ತಮ್ಮ ಧನ್ಯವಾದಗಳನ್ನು ಡಾ. ಮಂಜುನಾಥ್ ಜೆ .ಎ .ಉಪನ್ಯಾಸಕರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶುಭ ಹಾರೈಸಿದರು.

ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದಲ್ಲಿ ನೀರು ನಿಲ್ಲುವುದು ಸಹಜ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಮಲೇರಿಯದಂತಹ ಕಾಯಿಲೆಗಳು ಬರುತ್ತವೆ ಹಾಗಾಗಿ ಮಳೆಯ ನೀರು ನಿಲ್ಲದಂತೆ ಹರಿದು ಹೋಗುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ತಿಳಿಸುತ್ತಾ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ನ ಉಪಾಧ್ಯಕ್ಷರು ಶುಭ ಕೋರಿದರು.

ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರಣವುಳ್ಳ ಹಣ್ಣು ಹಂಪಲು ತರಕಾರಿ ಸೊಪ್ಪು ಬೇಳೆ ಕಾಳುಗಳು ಹಾಲು ಮೊಟ್ಟೆ ಮೀನು ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳುವಂತೆ ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಉಮೇಶ್ ಟಿ ಎಂ ಕರೆ ನೀಡಿದರು.

ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಡ್ರೈಡೇ ಕಾರ್ಯಕ್ರಮ ಪ್ರಾರಂಭವಾಗಿದ್ದು ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ತುಂಬಿಟ್ಟುಕೊಳ್ಳುವ ಪರಿಕರಗಳನ್ನು ಸಂಪೂರ್ಣ ಖಾಲಿ ಮಾಡಿ ಹೊಸದಾಗಿ ನೀರನ್ನು ತುಂಬಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಶಿಧರ್ ಅವರು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸ್ಥಳೀಯ ಸರ್ಕಾರೇತರ ಸಂಸ್ಥೆ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀ ಸತೀಶ್ ಎಂ ನಾಯಕ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಆರೋಗ್ಯ ಇಲಾಖೆ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ದೇಶಾದ್ಯಂತ ಸಹಕಾರ ನೀಡುತ್ತಿದೆ ಇದೇ ರೀತಿಯಾಗಿ ನಾವು ಸಹ ಮಕ್ಕಳು ಮತ್ತು ತಾಯಂದಿರಿಗೆ ಲಘುಉಪಹಾರ ವ್ಯವಸ್ಥೆ ಮಾಡಿದ್ದೇವೆ ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳ ದೈಹಿಕ ಬೆಳವಣಿಗೆಗಾಗಿ ಅಪೌಷ್ಟಿಕತೆ ಪ್ರಮಾಣ ತಿಳಿಯಲು ಮೌಲ್ಯಮಾಪನ ಮಾಡಬೇಕಾಗುತ್ತದೆ ತೋಳಿನ ಮಧ್ಯಭಾಗದ ಸುತ್ತಳತೆ 11.5 cm ಗಿಂತ ಕಡಿಮೆ ಇರುವ ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಅವರಿಗೆ ಹೆಚ್ಚಿನ ಪೌಷ್ಟಿಕ ಆಹಾರ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಅವಶ್ಯಕತೆ ಇದೆ. ಅಪೌಷ್ಟಿಕತೆಯು ದೇಹದ ಪ್ರಮುಖ ಅಂಗಗಳ ಕಾರ್ಯಕ್ಕೆ ಹಾನಿ ಉಂಟುಮಾಡುತ್ತದೆ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಹಾಗಾಗಿ ಪೌಷ್ಟಿಕ ಸಮತೋಲಿತ ಆಹಾರವನ್ನು ಉಪಯೋಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ ನಮ್ಮ ಜಿಲ್ಲೆಯ ತಾಯಂದಿರಿಗೆ ಆರೋಗ್ಯಕ್ಕೆ ಸಂಬAಧಪಟ್ಟ ಹಾಗೆ ಜ್ಞಾನ ಹೆಚ್ಚಿದ್ದು, ಆದರೆ ಕಾರ್ಯರೂಪಕ್ಕೆ ತರುವಲ್ಲಿ ದೊಡ್ಡ ಪ್ರಮಾಣದ ಯಶಸ್ಸು ಇನ್ನೂ ಆಗಿಲ್ಲ ಅದಕ್ಕಾಗಿ ನಾವೆಲ್ಲರೂ ಅಪೌಷ್ಟಿಕತೆ ವಿರುದ್ಧ ಹೋರಾಡಲು ಇಲ್ಲಿ ಪ್ರಾತ್ಯಕ್ಷಿತೆಯ ಮೂಲಕ ತೋರಿಸಲಾಗಿರುವ ಆಹಾರಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳುವುದರೊಂದಿಗೆ ಕಾರ್ಯರೂಪಕ್ಕೆ ತರೋಣ ಎಂದು ತಮ್ಮ ಅಮೂಲ್ಯವಾದ ಮಾಹಿತಿಯಲ್ಲಿ ತಿಳಿಸುತ್ತಾ 0-19 ವರ್ಷದ ಒಳಗಿನ ಮಕ್ಕಳಿಗಾಗಿ ಸರ್ಕಾರದಿಂದ ಜಾರಿ ಇರುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಡಾ. ಪ್ರೇಮಾನಂದ.ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಮಕ್ಕಳ ಪಡೆಯುವವರ ಸಂಖ್ಯೆ ಅಧಿಕವಾಗಿದ್ದು ಈ ಮಕ್ಕಳ ಪಾಲನೆ ಪೋಷಣೆಗೆ ಎಲ್ಲಾ ಇಲಾಖೆಯವರು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಮಕ್ಕಳಿಗೆ ಮಾತ್ರ ಪೌಷ್ಟಿಕ ಆಹಾರವನ್ನು ನೀಡುವುದಲ್ಲದೆ ತಾಯಂದಿರು ಕೂಡ ಸಮತೋಲಿತ ಪೌಷ್ಟಿಕ ಆಹಾರವನ್ನು ಗರ್ಭಿಣಿ ಅವಧಿಯಲ್ಲಿಯೇ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ನಾಗರತ್ನ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್ ಶೇಟ್, ಜಿಲ್ಲಾ ಆರ್ ಸಿ.ಎಚ್ ಅಧಿಕಾರಿಗಳು ಡಾ.ಜೋತ್ನಾ ಸ್ಥಳೀಯ ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ತಾಯಂದಿರು, ಮಕ್ಕಳು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆಭಾಕಾರ್ಡ್ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಮಾಡಲಾಯಿತು.

ಶ್ರೀಮತಿ ವೃಂದಾ.ಬಿ.ತಾಮಸೆ ಪ್ರಶಿಕ್ಷಣಾರ್ಥಿ ಪಿ.ಪಿ.ಜಿ.ಡಿ.ಎಚ್.ಪಿ.ಇ ವಿಭಾಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಸ್ವಾಗತಿಸಿದರು. ಶ್ರೀಮತಿ ಭಾಗ್ಯಲಕ್ಷ್ಮಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುಂದಾಪುರ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದ ಅರ್ಪಿಸಿದರು.

About Mallikarjun

Check Also

screenshot 2025 08 30 17 57 56 20 e307a3f9df9f380ebaf106e1dc980bb6.jpg

ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದಡಾ. ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ.

Bangalore's Kumbh Mela Cultural Academy. Punyakoti award to Shivakumar Malipatil.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.