Breaking News

ಅತಿಥಿಉಪನ್ಯಾಸಕರಿಂದ ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ ಅವರಿಗೆ ಸನ್ಮಾನ.

Media Academy member K. Ningajja was felicitated by the guest lecturer.

ಜಾಹೀರಾತು


ಪತ್ರಿಕೋದ್ಯಮದ ಮೂಲಕ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ.


ಗಂಗಾವತಿ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪಂಚಾಕ್ಷರಿ ಸ್ವಾಮಿ ಹಿರೇಮಠ ಹೇಳಿದರು ಅವರು ನಗರದ ಶ್ರೀ ಕೃಷ್ಣದೇವರಾಯ ವೃತದಲ್ಲಿರುವ ವಿಶ್ವಗುರು ಬಸವಣ್ಣನವರ ಹುತ್ತಳಿ ಬಳಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಕೆ ನಿಂಗಜ್ಜ ಅವರಿಗೆ ಸನ್ಮಾನಿಸಿ ಮಾತನಾಡಿದರು. ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಸಂರಕ್ಷಣೆ ಮಾಡುವ ಜೊತೆಗೆ ಸಮುದಾಯ ಮತ್ತು ಜನತೆಯ ಸಮಸ್ಯೆಗಳಿಗೆ ಪತ್ರಿಕೋದ್ಯಮದಲ್ಲಿ ಪರಿಹಾರವಿದೆ. ಗಂಗಾವತಿ ಸೇರಿದಂತೆ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಹಿರಿಯ ಪತ್ರಕರ್ತ ಕೆ ನಿಂಗಜ್ಜ ಅವರು ತಮ್ಮ ಪತ್ರಿಕಾ ವೃತ್ತಿಯಲ್ಲಿ ಹಲವು ವರದಿಗಳನ್ನು ಬರೆಯುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವ್ಯವಸ್ಥೆಗೆ ನೆರವಾಗಿದ್ದಾರೆ .
ಈ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಇತರೆ ಸಮಸ್ಯೆಗೆ ತಮ್ಮ ವರದಿಗಳ ಮೂಲಕ ಸ್ಪಂದಿಸಿ ಸಹಾಯ ಸಹಕಾರ ಮಾಡಿದ್ದಾರೆ. ಅತಿಥಿ ಉಪನ್ಯಾಸಕರ ಪ್ರತಿಭಟನೆ ಸಂದರ್ಭದಲ್ಲಿ ಕೆ.ನಿಂಗಜ್ಜ ಅವರು ವಿಶೇಷ ಆಸಕ್ತಿ ವಹಿಸಿ ವರದಿ ಮಾಡಿ ಸಮಸ್ಯೆಗೆ ಸಮಸ್ಯೆಯನ್ನು ಸರ್ಕಾರದ ಗಮನ ಪರಿಹಾರಕ್ಕೆ ಯತ್ನಿಸಿದ್ದಾರೆ .ಪ್ರಸ್ತುತ ಅವರಿಗೆ ಸರ್ಕಾರ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯತ್ವ ನೀಡಿದ್ದು ರಾಜ್ಯದಲ್ಲಿರುವ ಪತ್ರಿಕೋದ್ಯಮದ ಬೆಳವಣಿಗೆ ಮತ್ತು ಪತ್ರಕರ್ತರ ಹಿತಾಸಕ್ತಿಗಾಗಿ ಅವರು ಕಾರ್ಯ ಮಾಡಲಿ ಎಂದರು.
ಅತಿಥಿ ಉಪನ್ಯಾಸಕರ ಸಂಘದ ತಾಯಪ್ಪ ಮರ್ಚೇಡ್, ಪವನ್ ಕುಮಾರ್ ಗುಂಡೂರು, ಎ.ಕೆ. ಮಹೇಶ್ ರಾಘವೇಂದ್ರ ,ಖಾಜಾ ಸಾಬ್, ಶಾಹಿ ಕೌಸರ್,ಪರ್ವಿನ್ ಸುಲ್ತಾನ್, ವಿಜಯಮಹಾಂತೇಶ,ಮಲ್ಲಯ್ಯ ಸೇರಿ ಜೆಸ್ಕಾಂ ಅಧಿಕಾರಿ ಯಮನೂರಪ್ಪ ಸೇರಿ ಅನೇಕರಿದ್ದರು

About Mallikarjun

Check Also

ಲಯನ್ಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿಅಂತ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

National Democracy Day celebration in the premises of Lions Educational Institution ಗಂಗಾವತಿ: ವಿಕಲಚೇತನರ ಹಾಗೂ ಹಿರಿಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.