
Heavy rains: Collector Mohammad Roshan visited Khanapura taluk
ಬೆಳಗಾವಿ, ಜುಲೈ 21(ಕರ್ನಾಟಕ ವಾರ್ತೆ): ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಹಿರಿಯ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಜತೆಗಿದ್ದರು.
ಖಾನಾಪೂರ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಸ್ತುತದ ಸ್ಥಿತಿಗತಿ ಬಗ್ಗೆ, ಸಂಚಾರ ವ್ಯವಸ್ಥೆಯ ಬಗ್ಗೆ ಹಾಗೂ ನದಿ ಹಾಗೂ ಹೊಳೆಗಳ ನೀರಿನ ಮಟ್ಟ ಪರಿಶೀಲಿಸಿದರು.
ತಾಲೂಕಿನಲ್ಲಿನ ಕುಸುಮಳಿ ಗ್ರಾಮದಲ್ಲಿನ ಸೇತುವೆ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನವನ್ನು ನೀಡಿದರು.
ದಿ: 21.07.2024 ರಂದು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಬೆಳಗಾವಿ ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ ರೋಷನ್ ರವರು ಜಿಲ್ಲೆಯ ರೈತ ಸಂಘಟನೆಗಳು ಆಯೋಜಿಸಿದ್ದ “ರೈತ ಹುತಾತ್ಮರಿಗೆ ಶ್ರದ್ದಾಂಜಲಿ ಕಾರ್ಯಕ್ರಮ”ದಲ್ಲಿ ಭಾಗಿಯಾಗಿ ಹುತಾತ್ಮ ರೈತರಿಗಾಗಿ ಪುಷ್ಪಾರ್ಷನೆ ಮಾಡಿ ರೈತರಿಂದ ಮನವಿ ಸ್ವೀಕರಿಸಿದರು. ಈ ಸಮಯದಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಶ್ರೀ ಭೀಮಾಶಂಕರ ಗುಳೇದ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಶ್ರೀ ರಾಹುಲ್ ಶಿಂಧೆ ರವರು ಮತ್ತು ಅಪಾರ ಸಂಖ್ಯೆಯಲ್ಲಿ ರೈತರು ಹಾಜರಿದ್ದರು.
Kalyanasiri Kannada News Live 24×7 | News Karnataka
