Janaspanda meeting in Mangaluru village on Tuesday.
ಕೊಪ್ಪಳ : ದಿ. 23ರ ಮಂಗಳವಾರದಂದು ಕೊಪ್ಪಳ ಜಿಲ್ಲೆ, ಕುಕುನೂರ ತಾಲೂಕಿನ ಮಂಗಳೂರು ಗ್ರಾಮದ ಬಾಪೂಜಿ ಡಿ .ಇಡಿ. ಕಾಲೇಜ್ ಆವರಣದಲ್ಲಿ “ಜನ ಸ್ಪಂದನ”ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಈ ಮೂಲಕ ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದು- ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕು ಮಟ್ಟದಲ್ಲಿ” ಜನ ಸ್ಪಂದನ”ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಂಟಿಯಾಗಿ ತಾಲೂಕು ಮಟ್ಟದಲ್ಲಿ” ಜನ ಸ್ಪಂದನ”ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರಿಗೆ ಅದರ ಫಲಿತಾಂಶವನ್ನು ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ನಿಗದಿಪಡಿಸಲಾಗಿರುತ್ತದೆ.
“ಜನ ಸ್ಪಂದನ” ಕೋಶ, ವಿಭಾಗದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಪ್ಪದೆ ಹಾಜರಾಗಬೇಕು, ಬಾರದೇ ಇದ್ದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಗಳು ತಿಳಿಸಿದ್ದಾರೆ.
ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕುಕನೂರು ಪಟ್ಟಣದ ತಹಶೀಲ್ದಾರ ಪ್ರಾಣೇಶ ಹೆಚ್. ತಿಳಿಸಿದ್ದಾರೆ.