Breaking News

ಬೆಂಗಳೂರು ವಿವಿ: ಸಂಶೋಧನಾ ವಿದ್ಯಾರ್ಥಿ ಶ್ರೀನಿವಾಸ ಎನ್ ರವರಿಗೆ : ‘ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ’ ಪ್ರಧಾನ

Bengaluru University: Research student Srinivasa N: ‘Kannada Sahitya Gold Award’ Principal

ಜಾಹೀರಾತು
IMG 20240723 WA0249 300x200



ಬೆಂಗಳೂರು: ಜುಲೈ, 23: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಆಯೋಜಿಸಿದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ ‘ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ ರೂಪಾಂತರ” ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿವಿಯ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ನಡೆಸಲಾಯಿತು.

ಇದರ ಪ್ರಯುಕ್ತ ಕನ್ನಡ ಸಾಹಿತ್ಯದಲ್ಲಿ ಸಾಧನೆಗೈದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದಾರ್ಥಿ ಶ್ರೀನಿವಾಸ ಎನ್ ರವರಿಗೆ: ‘ ‘ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ’ ಪ್ರಧಾನವನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ , ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷ ಖಾನಂ, ಬೆಂವಿವಿಯ ಕುಲಸಚಿವ ಶೇಕ್ ಲತೀಫ್, ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಭೂಪಾಲ್ ನ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮಖನ್ ಲಾಲ್ ಚತುರ್ವೇದಿ, ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್, ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಉಪೇಂದ್ರ ಪಾಢಿ, ವಿವಿಯ ಬೋಧಕ ಮತ್ತು ಭೋಧಕೇತರ ವರ್ಗದವರು, ಸ್ನಾತಕೋತ್ತರ ಮತ್ತು ಸಂಶೋಧನಾರ್ಥಿಗಳು, ಮತ್ತಿತರರು ಸಮ್ಮುಖದಲ್ಲಿ ಸ್ಮರಿಣಿಕೆ ನೀಡಿ ಗೌರವಿಸಲಾಯಿತು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.