Application Invitation for Physiotherapist and respective post

ಗಂಗಾವತಿ: 2024-25 ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಹಾಗೂ ಸಮನ್ವಯ ಶಿಕ್ಷಣ ಶೀರ್ಷಿಕೆಯಡಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ ಶಾಲಾ ಸಿದ್ಧತೆ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಆಯಾ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು 26 ಜುಲೈ 2024 ರ ಒಳಗಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಂಗಾಪುರದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
