Massive protest led by labor union
ಕೊಪ್ಪಳ : ಗಂಗಾವತಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗಂಗಾವತಿ ತಾಲೂಕ ಮತ್ತು ಗ್ರಾಮಾಂತರ ಕಾರ್ಪೆಂಟರ್ ಕಾರ್ಮಿಕ ಸಂಘದ ನೇತೃತ್ವದಲ್ಲಿ ಸೋಮವಾರದಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಸಭೆ ಸೇರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಹಶೀಲ್ ಕಚೇರಿಗೆ ತೆರಳಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಎ. ಹುಲಗಪ್ಪ ಮಾತನಾಡಿ ಕಾರ್ಪೆಂಟರ್ ಕಾರ್ಮಿಕರು ನಿವೇಶನ ಹಾಗೂ ವಸತಿಗಾಗಿ ಈ ಹಿಂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಲ್ಲಿ ಮನವಿ ಪತ್ರ ಸಲ್ಲಿಸುತ್ತಾ ಬಂದಿದ್ದರೂ ಸಹ ಇದುವರೆಗೆ ಯಾವುದೇ ಒಬ್ಬ ಕಾರ್ಮಿಕರಿಗೆ ಸೌಲಭ್ಯ ದೊರೆಯದೆ ಇರುವುದು ನಮ್ಮ ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ ಆಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಈ ಸಮಸ್ಯೆಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ನಾನಾ ಭಾಗಗಳಲ್ಲಿ ತೆರಳಿ ಸಮೀಕ್ಷೆ ನಡೆಸಿ ಗಮನಿಸಿದಾಗ ಸಾವಿರಾರು ಸಂಖ್ಯೆಯ ಕಾರ್ಪೆಂಟರ್ ಕಾರ್ಮಿಕರಿಗೆ ನಿವೇಶನ ಹಾಗೂ ವಸತಿ ಸೌದಿಕೆ ಇಲ್ಲ ಜೊತೆಗೆ ಅರ್ಜಿಯೂ ಸಹ ಸಾಕಷ್ಟು ಕಾರ್ಮಿಕರು ಹಾಕಿಲ್ಲ ಇದರಿಂದ ಈಗಾಗಲೇ ಅರ್ಜಿ ಹಾಕಿದ ಕಾರ್ಮಿಕರಿಗೆ ಹಾಕದೇ ಇರುವ ಕಾರ್ಮಿಕ ವರ್ಗಕ್ಕೆ ತಕ್ಷಣವೇ ನಿವೇಶನ ಹಾಗೂ ವಸತಿ ಸೌಲಭ್ಯವನ್ನು ಕಲ್ಪಿಸಲು ಜಿಲ್ಲಾಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿದರು.
ಕೆಲವು ಕಾರ್ಮಿಕರಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಮಂಜೂರಾತಿ ಬಂದರು ಸಹ ನಿವೇಶನದ ಕೊರತೆಯಿಂದಾಗಿ ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ನಿವೇಶನ ಹಾಗೂ ವಸತಿಯಿಂದ ವಂಚಿತರಾಗಿದ್ದಾರೆ ಈ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಬಡ ಕುಟುಂಬ ಹಾಗೂ ಕಾರ್ಪೆಂಟರಗಳು ತಮ್ಮ ಜೀವನದ ಮೂಲ ವೃತ್ತಿನಾಗಿಸಿಕೊಂಡಿರುವ ಸಾವಿರಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ವಾಸವಾಗಿ,ಬಾಡಿಗೆ ಕಟ್ಟದೆ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ತಮ್ಮ ಅಳಲನ್ನು ಹೇಳಿದರು.
ಜಿಲ್ಲಾಧಿಕಾರಿಗಳು ಕೂಡಲೇ ಸಂಬಂಧಿಸಿದ ಇಲಾಖೆಗಳಿಂದ ವರದಿ ತರಸಿಕೊಂಡು ನಿವೇಶನ ಹಾಗೂ ವಸತಿ ಸೌಲಭ್ಯವನ್ನು ಕಲ್ಪಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಿಪ್ಪಣ್ಣ, ಶೇಕಮ್ಮ, ಮಂಜುನಾಥ, ಗಂಗಮ್ಮ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಪೆಂಟರ್ ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು