Breaking News

ಬೆಂಗಳೂರಿಗೆ ರೈಲಿನ ಮೂಲಕ ಬಂದಿದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ ಎಂಬುದಾಗಿ ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

The food department has given official information that the meat that came to Bangalore by train was not dog meat but mutton meat.

ಜಾಹೀರಾತು

ಬೆಂಗಳೂರು: ಹೊರ ರಾಜ್ಯಗಳಿಂದ ನಾಯಿ ಮಾಂಸ ಸರಬರಾಜು ಮಾಡುತ್ತಿರುವಂತ ಗಂಭೀರ ಆರೋಪ ಕೇಳಿ ಬಂದಿತ್ತು. ಅಲ್ಲದೇ ರೈಲ್ವೇ ನಿಲ್ದಾಣದಲ್ಲೇ ಬಂದಂತ ಮಾಂಸವನ್ನು ಪ್ರಶ್ನಿಸಲಾಗಿತ್ತು. ಇದೀಗ ಆ ಮಾಂಸದ ಮಾದರಿಯನ್ನು ಸಂಗ್ರಹಿಸಿದ್ದಂತ ಆಹಾರ ಇಲಾಖೆಯು, ಬೆಂಗಳೂರಿಗೆ ರೈಲಿನ ಮೂಲಕ ಬಂದಿದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ ಎಂಬುದಾಗಿ ಅಧಿಕೃತ ಮಾಹಿತಿಯನ್ನು ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಅಧಿಕೃತ ಮಾಹಿತಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಹಂಚಿಕೊಂಡಿದೆ. ದಿನಾಂಕ:26.07.2024 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ರಾಜಸ್ಥಾನದಿಂದ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ ಎಂದು ಹೇಳಿದೆ.

ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಳಕಂಡಂತೆ ಕ್ರಮಗಳನ್ನು ವಹಿಸಲಾಗಿರುತ್ತದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ ಎಂದು ತಿಳಿಸಿದೆ.

ಸಂಬಂಧಿಸದಿಂತ ವ್ಯಾಪ್ತಿಯ ಅಂಕಿತಾಧಿಕಾರಿಗಳು ” ಮತ್ತು ಆಹಾರ ಸುರಕ್ಷತಾಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಪರಿಶೀಲನೆ ಸಂಧರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್‌ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕೆ ವಾಹನದಲ್ಲಿರಿಸಿರುವುದು ಕಂಡುಬಂದಿರುತ್ತದೆ. ಒಟ್ಟು 84 ಸಂಖ್ಯೆಯ ಪಾರ್ಸೆಲ್‌ಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿ ಪ್ರಾಣಿಯ ಮಾಂಸವಿರುವುದು ಕಂಡುಬಂದಿರುತ್ತದೆ. ಯಾವ ಪ್ರಾಣಿಯ ಮಾಂಸವೆಂದು ಖಚಿತಪಡಿಸಿಕೊಳ್ಳಲು ಮಾಂಸದ ಕಾನೂನಾತ್ಮಕ ಆಹಾರ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಸದರಿ ಮಾದರಿಯನ್ನು ವಿಶ್ಲೇಷಣೆಗಾಗಿ ಹೈದ್ರಾಬಾದ್‌ನಲ್ಲಿರುವ ICAR, National Meat Research Institute, Chengicherla, Boduppal Post, Hyderabad-500092 ಸರ್ಕಾರಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ ಎಂದು ಹೇಳಿದೆ.

ಮುಂದುವರೆದು, ಈ ಕುರಿತಂತೆ ವಿಶ್ಲೇಷಣಾ ವರದಿ ಸಂಖ್ಯೆ: NMRI/MSIL/ 2024/00025/R, ದಿನಾಂಕ:30.07.2024 ರ ಪರೀಕ್ಷಾ ವಿಧಾನ Molecular Biomarker Analysis (DNA) based on NMRI/MSIL/STP-001 S: Ovis aries (sheep) o ವರದಿ ಬಂದಿರುತ್ತದೆ ಎಂಬ ಮಾಹಿತಿಯನ್ನು ನೀಡಿದೆ. ಈ ಮೂಲಕ ಬೆಂಗಳೂರಿಗೆ ರೈಲಿನ ಮೂಲಕ ಬಂದಂತದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ ಎಂಬುದಾಗಿ ಆಹಾರ ಇಲಾಖೆಯು ಅಧಿಕೃತವಾಗಿ ಮಾಹಿತಿ ನೀಡಿದೆ.

About Mallikarjun

Check Also

ಹಿರೇ ಬೇರಿಗೆಯಲ್ಲಿ ಸ್ಮಾರಕಗಳ ಹೊಸ ಶೋಧ:

New discovery of monuments at Hire Berege: ಸಿಂಧನೂರು,ಅ20: ಭಾರತ ದೇಶದ ಅನೇಕ ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.