Breaking News

ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಸೂಚನೆ- ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ

DySP Siddalingappa Gowda Patil advises- Wear a helmet and drive

ಜಾಹೀರಾತು

ಗಂಗಾವತಿ. ದ್ವೀಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಮ್ಮ ಅಮೂಲ್ಯ ಜೀವನ ಕಾಪಾಡಿಕೊಳ್ಳಿ ಎಂದು ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಇಂದು ಗಂಗಾವತಿ ನಗರದಲ್ಲಿ ಪ್ರಮುಖ ರಸ್ತೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು. ವಾಹನ • ಚಲಾಯಿಸುವ ಸಂದರ್ಭದಲ್ಲಿ
ಅಚಾನಕಾಗಿ ನಡೆಯುವ ಅಪಘಾತದಲ್ಲಿ ಹೆಲ್ಮೆಟ್ ಜೀವ
ಉಳಿಸುವ ಸಾಧನವಾಗಿದೆ. ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂಯೆ ಸುಪ್ರೀಂಕೋರ್ಟ್ ಆದೇಶವಿದೆ. ಈ • ಆದೇಶ ಎಲ್ಲರು ಪಾಲಿಸಬೇಕು. ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳ ನಿರ್ದೇಶನದಂತೆ ನಾವು ವಾಹನ ಸವಾರರಿಗೆ ಹೆಲ್ಮೀಟ್ ಧರಿಸುವಂತೆ ಅರಿವು ಮೂಡಿಸುತ್ತಿದ್ದೇವೆ.
ಪ್ರತಿಯೊಬ್ಬರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ. ಇಲ್ಲದಿದ್ದರೆ ದಂಡ ಹಾಕಲಾಗುವುದು ಎಂದು ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಸೂಚನೆ ನೀಡಿದರು.

About Mallikarjun

Check Also

ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವನ್ನು ದೊಡ್ಡಮಟ್ಟದಲ್ಲಿ ಬೆಳೆಸುವ ಚಿಂತನೆಯಿದೆ: ನೂತನ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಆಶಯ

There is a plan to develop Maharishi Valmiki University on a large scale: New Vice …

Leave a Reply

Your email address will not be published. Required fields are marked *