Reporter Mamata is no more
ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದಎಂ ಆರ್ ಮಮತ ಅವರು ಇಂದು ದೈವಾಧೀನರಾಗಿದ್ದಾರೆ ಎಂದು ತಿಳಿಸಲು ದುಃಖ ವಾಗುತ್ತದೆ
ಇವರು ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪತಿ ಹಿರಿಯ ಪತ್ರಕರ್ತ ಎಚ್ ಆರ್ ರವೀಶ್, ಮಗ ಪ್ರಜ್ವಲ್ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.
ಮಮತ ಅವರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ಶನಿವಾರ ಮಧ್ಯಾಹ್ನ ನೆರವೇರಲಿದೆ.
ಬೆಂಗಳೂರಿನ ಅವರ ಮನೆಯಲ್ಲಿ ನಾಳೆ ಬೆಳಿಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.