Awareness of child right, child friendly laws
ಕಾರಟಗಿ ನವನಗರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮವು ಮಂಗಳವಾರ ಕಮ್ಮವಾರಿ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಾಂತಯ್ಯಸ್ವಾಮಿ ಅವರು ಮಾತನಾಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯ ವ್ಯಾಪ್ತಿ ಬಗ್ಗೆ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲನ್ಯಾಯ ಕಾಯ್ದೆ 2015ರ ಕುರಿತು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ವಿವರಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಬಸಮ್ಮ ಅವರು ಮಾತನಾಡಿ, ರಾಜ್ಯವನ್ನು ಬಾಲ್ಯವಿವಾಹ ಮುಕ್ತ ರಾಜ್ಯವನ್ನಾಗಿಸುವ ಹಿನ್ನಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ-2006ನ್ನು ಜಾರಿಗೆ ತಂದಿದ್ದು, ಈ ಕಾಯ್ದೆಯನ್ನು ಕರ್ನಾಟಕ ರಾಜ್ಯ ಸರಕಾರವು ತಿದ್ದುಪಡಿಯನ್ನು-2016ರಲ್ಲಿ ಮಾಡಿದೆ. ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕವು ಶಿಕ್ಷಾರ್ಹ ಅಪರಾಧವಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರನ್ವಯ ಕನಿಷ್ಠ 10 ವರ್ಷಗಳ ಜೈಲು ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆಂದು ತಿಳಿಸಿದರು
ಈ ಸಂದರ್ಭದಲ್ಲಿ ಬಸವರಾಜ್ ಎಎಸ್ಐ, ಯಮುನಮ್ಮ ಮಕ್ಕಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ, ರವಿಕುಮಾರ್ ಸೋಶಿಯಲ್ ವರ್ಕರ್ ಮಕ್ಕಳ ರಕ್ಷಣಾ ಘಟಕ ಕೊಪ್ಪಳ, ಆಡಳಿತ ಅಧಿಕಾರಿ ಶ್ರೀಮನ್ ನಾರಾಯಣ, ಪ್ರಾಚಾರ್ಯರು ಕೆಎಸ್ ಗುರುಮಠ, ಉಪ ಪ್ರಾಚಾರ್ಯರು ಎಮ್ ಡಿ ರಫೀಕ್, ಬಾಲ ಗುರುಕುಲ ಮುಖ್ಯಸ್ಥರು ಶ್ರೀದೇವಿ ಕೊಲ್ಲಾ, ವಸಂತ ದೇಸಾಯಿ ಗಂಗಮ್ಮ ಹಿರೇಮಠ್, ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.