Breaking News

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ

Application Invitation for Children’s Book Chandira Award

ಜಾಹೀರಾತು


ರಾಯಚೂರು,ಆ.07,(ಕರ್ನಾಟಕ ವಾರ್ತೆ):- ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಮಕ್ಕಳ ಸಾಹಿತ್ಯದ ಕೃತಿಗಳನ್ನು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಹಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.
ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವದಿಯಲ್ಲಿ ಪ್ರಕಟಗೊಂಡ ಮಕ್ಕಳ ಸ್ವರಚಿತ ಕವನ ಸಂಕಲನ, ನಾಟಕ,(ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.
ಮೇಲ್ಕಾಣಿಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥಾವ ಮೌಲ್ಯಮಾಪನಗೊಳಿಸಲು ಪ್ರತಿಯೊಂದುಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಆ.26 ರ ಒಳಗಾಗಿ ಅಕಾಡೆಮಿಯ ಕೇಂದ್ರಕಛೇರಿ ಚಂದ್ರಿಕಾ ಲೇ ಔಟ್ ಹಿಂಭಾಗಕೆ.ಎಚ್.ಬಿ ಕಾಲೋನಿ ಲಕಮನದೊಡ್ಡಿ ಧಾರವಾಡ-580004 ಈ ವಿಳಾಸಕ್ಕೆ ಪೋಸ್ಟ್ ಮುಖಾಂತರ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ನಮೂನೆ ಮತ್ತು ಮಾನದಂಡಗಳಿಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವೆಬ್‌ಸೈಟ್ ಲಿಂಕ್ https://balvikasscademy.karnataka.gov.in ಅಥಾವ ದೂರವಾಣಿ ಸಂಖ್ಯೆ: 0836-2465490 ಮೂಲಕ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಹದಿನೈದು ದಿನವಾದರೂ ಬರದ ಕಸ ವಿಲೇವಾರಿ ವಾಹನ,,! ಸಾರ್ವಜನಿಕರ ಗೋಳು ಕೇಳುವವರು ಯಾರು ??

The garbage disposal vehicle hasn't arrived for fifteen days! Who listens to the public's complaints? …

Leave a Reply

Your email address will not be published. Required fields are marked *