Breaking News

ಆರೋಗ್ಯ ಇಲಾಖೆ; ಕಲಾ ತಂಡಗಳಿಂದ ಅರ್ಜಿ ಆಹ್ವಾನ

Department of Health; Applications invited from Art Teams

ಜಾಹೀರಾತು


ರಾಯಚೂರು,ಆ.07,(ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ 2024-25ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ರಾಷ್ಟಿçÃಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಾನಪದ ಕಲಾ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಅರ್ಹ ಜಾನಪದ ಕಲಾ ತಂಡಗಳಿAದ ಅರ್ಜಿ ಅಹ್ವಾನಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆೆ, ಸಂಗೀತ ಮತ್ತು ನಾಟಕ ಅಕಾಡೆಮಿ ಅಡಿಯಲ್ಲಿ ನೊಂದಣಿಯಾಗಿ ಈಗಾಗಲೇ ಸರ್ಕಾರಿ ಕಾರ್ಯಕ್ರಗಳ ಅನುಷ್ಠಾನದಲ್ಲಿ ಜಾನಪದ ಕಲಾತಂಡದ ಮೂಲಕ ಪ್ರದರ್ಶನವನ್ನು ನೀಡಿರುವ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕ್ರಗಳನ್ನು ಪ್ರಚಾರ ಮಾಡುವ ಇಚ್ಚಯುಳ್ಳವರು ಇದೇ 2024ರ ಆಗಸ್ಟ್ 19ರೊಳಗಾಗಿ ಅರ್ಜಿಯನ್ನು ಐ.ಇ.ಸಿ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಕಚೇರಿ ಸಮಯದಲ್ಲಿ ಅರ್ಜಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿ, ಖುದ್ದಾಗಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾನದಂಡನೆಗಳು: ಕಲಾ ತಂಡವು ರಾಯಚೂರು ಜಿಲ್ಲೆಯ ವಿಳಾಸದೊಂದಿಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಲ್ಲಿ ನೋಂದಣಿಯಾಗಿರಬೇಕು. ಕಲಾತಂಡವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಂಗೀತ ಮತ್ತು ನಾಟಕ ಅಕಾಡೆಮಿಯಲ್ಲಿ ನೋಂಣಿಯಾಗಿರಬೇಕು.
ಕಲಾ ತಂಡದ ಹೆಸರಿನಲ್ಲಿ ರಾಷ್ಟಿçà ಕೃತ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರಬೇಕು. ಕಲಾತಂಡ ಸದಸ್ಯರು ಬ್ಯಾಂಕನಲ್ಲಿ ಖಾತೆಯನ್ನು ಹೊಂದಿರಬೇಕು. ಕಳೆದ 2 ವರ್ಷಗಳಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಗಳ ಕುರಿತು ಜಾಗೃತಿ ಮೂಡಿಸಿರಬೇಕು. ಕಳೆದ 2 ವರ್ಷಗಳಲ್ಲಿ ಇತರೇ ಸರಕಾರಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಿರಬೇಕು. ಪ್ರತಿ ತಂಡದಲ್ಲಿ ಕಡ್ಡಾಯವಾಗಿ 8 ಜನ ಕಲಾವಿಧರು ಇರತಕ್ಕದ್ದು, ಅದರಲ್ಲಿ ಕಡ್ಡಾಯವಾಗಿ 2 ಮಹಿಳಾ ಕಲಾವಿಧರು ಇರತಕ್ಕದ್ದು.

ನಿಯಮನುಸಾರ ಇದ್ದ ತಂಡಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸಮಿತಿಯ ಉಪಸ್ಥಿತಿಯಲ್ಲಿ ಕಲಾ ಪ್ರದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಲಕ್ಷಿö್ಮ ಮುಂಡಾಸ್ ಅವರ ದೂರವಾಣಿ ಸಂಖ್ಯೆ;8971028701ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 09 15 17 54 00 88 6012fa4d4ddec268fc5c7112cbb265e7.jpg

ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂಜಿನಿಯರ್ ದಿನಾಚರಣೆ.

Engineer Day Celebration at Mahan Kids School. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದೇ ದಿನಾಚರಣೆಯ ಮೂಲ ಉದ್ದೇಶ… ನೇತ್ರಾಜ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.