Breaking News

ಕಾಡುಗೊಲ್ಲ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

Kadugolla Development Corporation; Application invited under various schemes

ಜಾಹೀರಾತು


ರಾಯಚೂರು,,(ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿಗೆ ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳ ಆಹ್ವಾನಿಸಲಾಗಿದೆ.
ನಿಗಮದ ಯೋಜನೆಗಳು; ಸ್ವಯಂ ಉದ್ಯೋಗ ನೇರಸಾಲ ಯೋಜನೆ. ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು). ಗಂಗಾ ಕಲ್ಯಾಣ ಯೋಜನೆ. ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ). ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆಯಡಿ ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇದೇ 2024ರ ಆಗಸ್ಟ್ 31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಹತೆಗಳು; ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಹಿAವಕ /155/ಬಿಸಿಎ/2020, ದಿನಾಂಕ:28/09/2020ರನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ 3.50/-ಲಕ್ಷ ರೂ.ಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.
ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ 98,000/- ರೂ. ಮತ್ತು ನಗರ ಪ್ರದೇಶದವರಿಗೆ 1,20,000/-ರೂ.ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.
ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಹೆಚ್ಚಿನ ಮಾಹಿತಿ ನಿಗಮದ ಸಹಾಯವಾಣಿ ಸಂಖ್ಯೆ: 080-22374848 ಮತ್ತು 7899899039ಗೆ ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಡಾ,ಗಂಗಾಮಾತಾಜಿ ನೇತೃತ್ವದಲ್ಲಿ ನಡೆಯುತ್ತಿರು 23ನೇ ಕಲ್ಯಾಣ ಪರ್ವಕ್ಕೆ 25 ಸಾವಿರ ರೊಟ್ಟಿ ತಯಾರಿ

Preparation of 25 thousand roti for 23rd Kalyana Parva is going on under the leadership …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.