Kadugolla Development Corporation; Application invited under various schemes
ರಾಯಚೂರು,,(ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿಗೆ ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳ ಆಹ್ವಾನಿಸಲಾಗಿದೆ.
ನಿಗಮದ ಯೋಜನೆಗಳು; ಸ್ವಯಂ ಉದ್ಯೋಗ ನೇರಸಾಲ ಯೋಜನೆ. ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು). ಗಂಗಾ ಕಲ್ಯಾಣ ಯೋಜನೆ. ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ). ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆಯಡಿ ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇದೇ 2024ರ ಆಗಸ್ಟ್ 31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಹತೆಗಳು; ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಹಿAವಕ /155/ಬಿಸಿಎ/2020, ದಿನಾಂಕ:28/09/2020ರನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ 3.50/-ಲಕ್ಷ ರೂ.ಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.
ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ 98,000/- ರೂ. ಮತ್ತು ನಗರ ಪ್ರದೇಶದವರಿಗೆ 1,20,000/-ರೂ.ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.
ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಹೆಚ್ಚಿನ ಮಾಹಿತಿ ನಿಗಮದ ಸಹಾಯವಾಣಿ ಸಂಖ್ಯೆ: 080-22374848 ಮತ್ತು 7899899039ಗೆ ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…