Breaking News

ಪ.ಜಾತಿ ಪ.ಪಂಗಡ ವಿದ್ಯಾರ್ಥಿ ಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಲು ದವಿ ಪರಿಷತ್ ಆಗ್ರಹ.

Davi Parishad demands to distribute textbooks to P. caste and P. sect students.

ಜಾಹೀರಾತು
ಜಾಹೀರಾತು

ಮಾನ್ವಿ : ಶೈಕ್ಷಣಿಕ ತಿಂಗಳುಗಳು ಆರಂಭವಾದ ತಕ್ಷಣವೇ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಸಮಿತಿಯಿಂದ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ನಂತರ ತಾಲ್ಲೂಕು ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷರಾದ ಬಂಡೆಗುರು ಕರೆರಗುಡ್ಡ ಮಾತನಾಡಿ ಸರ್ಕಾರವು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಆದರೆ ಆ ಯೋಜನೆಗಳನ್ನು ಸಮರ್ಪಕ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ ಎದ್ದು ತೋರುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.
ಅದರ ಬಾಗವಾಗಿ ಎಸ್ ಸಿ ,ಎಸ್ ಟಿ ಸಮುದಾಯಗಳ ಅಭಿವೃದ್ಧಿಗೆ ಮತ್ತು ಈ ಸಮುದಾಯಗಳ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಸರ್ಕಾರವು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುದಾನವನ್ನು ಮೀಸಲಿಟ್ಟಿದೆ. ಆದರೆ ಈ ಅನುದಾನ ಈ ಸಮುದಾಯಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಗ್ರಾಮ ಪಂಚಾಯಿತಿಗಳಲ್ಲಿ ಈ ಸಮುದಾಯಗಳ ವಿದ್ಯಾರ್ಥಿಗಳಿಗೆ ಶೇಕಡ 25ರ ಅನುದಾನದಲ್ಲಿ ಪಠ್ಯಪುಸ್ತಕ ವಿತರಣೆ ಮಾಡುವ ಯೋಜನೆ ಇದ್ದು ಈ ಯೋಜನೆಯನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನ ಮಾಡದೆ ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯಲು ಇದು ಒಂದು ಕಾರಣವಾಗಿದೆ. ಮತ್ತು ಪಠ್ಯಪುಸ್ತಕವನ್ನು ಕೇಳಲು ಹೋದ ವಿದ್ಯಾರ್ಥಿಗಳಿಗೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಉಡಾಫೆ ಉತ್ತರವನ್ನು ನೀಡಿ ಅವರನ್ನು ಅಲೆದಾಡಿಸುತ್ತಿದ್ದಾರೆ.ಹಾಗಾಗಿ ಈ ಕೂಡಲೇ ಮೇಲಾಧಿಕಾರಿಗಳಾದ ತಾವುಗಳು ಪಂಚಾಯತಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಂಡು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ವರ್ಷ ಶೈಕ್ಷಣಿಕ ಆರಂಭವಾದ ಜೂನ್ ಜುಲೈ ತಿಂಗಳುಗಳಲ್ಲಿ ಅರ್ಜಿಯನ್ನು ಕರೆಯಬೇಕು, ಮತ್ತು ಕಡ್ಡಾಯವಾಗಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸೂಚನಾ ಫಲಕವನ್ನು ಹೊರಡಿಸಬೇಕು ಹಾಗೂ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನವನ್ನು ಅಥವಾ ಪಠ್ಯಪುಸ್ತಕ ವಿತರಣೆಯನ್ನು ನೀಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕು ಇಲ್ಲದೇ ಹೋದರೆ
ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ನಮ್ಮ ಸಮಿತಿ ನೇತೃತ್ವದಲ್ಲಿ ತಮ್ಮ ಕಚೇರಿ ಎದುರ ಬೃಹತ್ ಪ್ರತಿಭಟನೆ ಮಾಡಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಓಂ ಶ್ರೀ, ಕಿರಣ್ ಉದ್ಬಾಳ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About Mallikarjun

Check Also

ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ.

Inaugural ceremony of the State Committee for Implementation of Kannada Language in Courts. ಬೆಂಗಳೂರು ಮಾರ್ಚ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.