Performance of children in various sports at zone and taluk level
ಗಂಗಾವತಿಯ ಪ್ರತಿಷ್ಠಿತ ಶಾಲೆಯಾದ ಲಿಟಲ್ ಹಾರ್ಟ್ಸ್ ಶಾಲೆಯ ಮಕ್ಕಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸಾಧನೆ ಮೆರೆದಿದ್ದಾರೆ. ದಕ್ಷಿಣ ವಲಯ ಮಟ್ಟದ ಪ್ರಾಥಮಿಕ ವಿಭಾಗದಲ್ಲಿ ಬಾಲಕರ ವಾಲಿಬಾಲ್ ಕ್ರೀಡೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಬಾಲಕಿಯರ ವಿಭಾಗದ ಥ್ರೊಬಾಲ್ ನಲ್ಲಿ ಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲ್ ಬ್ಯಾಡ್‌ಮಿಂಟನ್ ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಬಾಲಕರ ವಿಭಾಗದ ಬಾಲ್ ಬ್ಯಾಡ್‌ಮಿಂಟನ್ ಕ್ರೀಡೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರೌಢಶಾಲಾ ಬಾಲಕರ ವಿಭಾಗದಲ್ಲೂ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೂ ಶಟಲ್ ಕಾಕ್ ಕ್ರೀಡೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಹರ್ಡಲ್‌ನಲ್ಲಿ ಶಾಲೆಯ ಪ್ರಾಥಮಿಕ ವಿಭಾಗದ ಹಾಗೂ ಪ್ರೌಢಶಾಲಾ ವಿಭಾಗದ ಮಕ್ಕಳು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ೪೦೦ ಮೀಟರ್ ಹರ್ಡಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾ ಸಾಧನೆ ಮೆರೆದ ವಿದ್ಯಾರ್ಥಿ/ನಿಯರನ್ನು ಶಾಲೆಯ ಕಾರ್ಯದರ್ಶಿ ಶ್ರೀ ಜಗನ್ನಾಥ ಆಲಂಪಲ್ಲಿ ಅಭಿನಂದಿಸಿ ಪ್ರೋತ್ಸಾಹಿಸಿದರು. ಶಾಲೆಯ ದೈಹಿಕ ಶಿಕ್ಷಕರಾದ ಸೋಮನಾಥ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಿ ಸಿದ್ದಗೊಳಿಸಿದ್ದಕ್ಕಾಗಿ ಶಾಲೆಯ ಕಾರ್ಯದರ್ಶಿಗಳು ಅವರನ್ನು ಅಭಿನಂದಿಸಿದರು.