Breaking News

ಜಿಲ್ಲಾ ಉಸ್ತುವಾರಿ ಸಚಿವರಿಂದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ

Hoisting of the 78th Independence Day flag by the District In-charge Minister

ಜಾಹೀರಾತು
ಜಾಹೀರಾತು

ಕೊಪ್ಪಳ ಆಗಸ್ಟ್ 15 (ಕ.ವಾ): ಕೊಪ್ಪಳ
ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಆಗಸ್ಟ್ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಸಚಿವರು ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಕ್ರೀಡಾಂಗಣದ ಅಂಗಳದಲ್ಲಿ ಸಂಭ್ರಮ ಕಂಡುಬಂದಿತು.
ವಿದ್ಯಾರ್ಥಿ ಯುವಜನರು ಸೇರಿದಂತೆ
ಸೇರಿದ್ದ ಜನಸ್ತೋಮದಿಂದ ಚಪ್ಪಾಳೆ ಮೊಳಗಿತು. ರಾಷ್ಟ್ರಗೀತೆ ಹಾಡಲಾಯಿತು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸೇನಾನಿಗಳ ತ್ಯಾಗ ಸಾಧನೆಯನ್ನು ಸ್ಮರಿಸಲಾಯಿತು.
ಧ್ವಜಾರೋಹಣದ ಬಳಿಕ ಸಚಿವರು
ಫರೇಡ್ ಪರಿವೀಕ್ಷಣೆ ಕೈಗೊಂಡರು.
ಮನೋರಂಜಿತ ಪಥ ಸಂಚಲನ:
ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ಪಡೆ, ಗೃಹರಕ್ಷಕ ದಳ, ಮಹಿಳಾ ರಕ್ಷಕ ದಳ, ಗವಿಸಿದ್ದೇಶ್ವರ ಪ್ರೌಢಶಾಲೆಯ
ಎನ್ ಸಿಸಿ ದಳ, ಬಾಲಕರ ಪ್ರೌಢಶಾಲೆಯ ಎನ್ ಸಿಸಿ, ಬಾಲಕಿಯರ ಪ್ರೌಢಶಾಲೆಯ ಸೇವಾದಳ, ಶಾಂತಿನಿಕೇತನ ಶಾಲೆ, ಕಾಳಿದಾಸ ಶಾಲೆ, ಎಸ್ ಎಫ್ ಎಸ್ ಶಾಲೆ, ಶಿವಶಾಂತವೀರ ಪ್ರೌಢಶಾಲೆ, ಗವಿಸಿದ್ದೇಶ್ವರ ಶಾಲೆಯ
ಸ್ಕೌಟ್ಸ್ ಪಡೆ, ವಿವೇಕಾನಂದ ಪ್ರೌಢಶಾಲೆಯ ಗೈಡ್ಸ್ ಪಡೆ, ನ್ಯು ಆಕ್ಸಪರ್ಡ ಶಾಲೆಯ ವಿದ್ಯಾರ್ಥಿ ತಂಡ ಸೇರಿದಂತೆ ವಿವಿಧ 19 ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪಥ ಸಂಚಲನದ ಬಳಿಕ ಸಚಿವರು ಜಿಲ್ಲೆಯ ಸಾರ್ವಜನಿರನ್ನುದ್ದೇಶಿಸಿ ಮಾತನಾಡಿದರು.
ಸಂವಿಧಾನ ಗ್ರಂಥ ವೀಕ್ಷಣೆ: ಸ್ವಾತಂತ್ರೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲಾಡದಿಂದ
ಜಿಲ್ಲಾ ಕ್ರೀಡಾಂಗಣದ ದ್ವಾರ ಬಾಗಿಲಿನಲ್ಲಿ ಇಡಲಾಗಿದ್ದ ಜಾಗತಿಕ ಪವಿತ್ರ ಗ್ರಂಥ ಸಂವಿಧಾನವನ್ನು ಸಚಿವರು ವೀಕ್ಷಣೆ ಮಾಡಿದರು.
ಶೌಚಾಲಯ ಬಳಕೆಯ ಪ್ರಾತ್ಯಕ್ಷಿಕೆಯ ವೀಕ್ಷಣೆ: ಜಿಲ್ಲಾ ಪಂಚಾಯತನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಚ ಭಾರತ ಮಿಷನ್ ಇವರು ನಿರ್ಮಿಸಿದ್ದ ವೈಯಕ್ತಿಕ ಶೌಚಾಲಯ ಬಳಕೆಯ ವಿಧಾನಗಳ ಮಾಹಿತಿಯ ಪ್ರಾತ್ಯಕ್ಷಿಕೆಯನ್ನು ಸಹ ಸಚಿವರು ವೀಕ್ಷಣೆ ನಡೆಸಿದರು.
ಸಮಾರಂಭದಲ್ಲಿ ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರರಾದ ವಿಠ್ಠಲ್ ಚೌಗಲಾ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ಧರು.

About Mallikarjun

Check Also

ಎಪಿಎಂಸಿ ಆವರಣದಲ್ಲಿ ಭರದಿಂದಸಿದ್ದತೆಗೊಳ್ಳುತ್ತಿರುವ ಸಹಕಾರಿ ಜಾಗೃತ ಸಮಾವೇಶಕಾರ್ಯಕ್ರಮದ ವೇದಿಕೆ,,, ಮುತುವರ್ಜಿವಹಿಸುತ್ತಿರುವಪೋಲಿಸ್ಇಲಾಖೆ,

The platform of Co-operative Vigilance Conference program is being prepared in full swing in APMC …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.