Hoisting of the National Flag by the District In-charge Minister Celebrations in Raichur, Independence Day celebrations in full swing

ರಾಯಚೂರು,ಆ.15,(ಕರ್ನಾಟಕ ವಾರ್ತೆ):- 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಗುರುವಾರ ದಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶವನ್ನು ನೀಡಿದರು.
ಇದೇ ಸಂದರ್ಭದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ವಿವಿಧ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.