Rayanna Jayanti Celebration of Krantiveera Samgolli at District Collector’s Office
ರಾಯಚೂರು,ಆ.16,(ಕರ್ನಾಟಕ ವಾರ್ತೆ):- ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ, ಗೌರವ ನಮನ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಪ್ಪ ಯಲ್ಲಪ್ಪ ಭಜಂತ್ರಿ, ರಾಯಚೂರು ಸಹಾಯಕ ಆಯುಕ್ತರಾದ ಮೈಬೂಬಿ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಜಗದೀಶ್ ಗಂಗಣ್ಣನವರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಇದ್ದರು.