Cooperation is necessary for comprehensive development of the city: District Collector Nitish K.
ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಆಡಳಿತಾಧಿಕಾರಿಗಳಿಂದ ಸೂಚನೆ
ರಾಯಚೂರು,ಆ.೧೬,():- ರಾಯಚೂರು ನಗರದ ಸಮಗ್ರ ಅಭಿವೃದ್ಧಿ ಹಾಗೂ ಸ್ವಚ್ಛ ನಗರಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರ ಅತ್ಯಂತ ಅಗತ್ಯವಾಗಿದೆ. ನಿಮ್ಮ ಸಂಪೂರ್ಣ ಸಹಕಾರದೊಂದಿಗೆ ಸಮರ್ಪಕ ನಾಗರಿಕ ಸೌಕರ್ಯ ಪೂರೈಕೆ ನಮ್ಮೆಲ್ಲರ ಕರ್ತವ್ಯವಾಗಬೇಕೆಂದು ನಗರಸಭೆಯ ಆಡಳಿತಾಧಿಕಾರಿಗಳು ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಹೇಳಿದರು.
ವರ್ಷದ ೩೬೫ದಿನಗಳ ಅವರು ಆ.೧೬ರ ಶುಕ್ರವಾರ ದಂದು ನಗರದ ನಗರಸಭೆಯ ಸಭಾಂಗಣದಲ್ಲಿ ನಗರಸಭೆಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕಾಲ ಸೇವೆಮಾಡಿ, ಉತ್ತಮ ಕಾರ್ಯನಿರ್ವಹಣೆ ಮಾಡಬೇಕು. ಅದಕ್ಕಾಗಿ ಜನರು ನಮಗೆ ಅವಕಾಶ ನೀಡಿದ್ದು, ಆ ಅವಕಾಶವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಯಚೂರು ಜಿಲ್ಲೆಯು ಸ್ವಚ್ಛ ಹಾಗೂ ಅಭಿವೃದ್ಧಿ ನಗರಕ್ಕಾಗಿ ಶ್ರಮಿಸಬೇಕು. ಇದಕ್ಕಾಗಿ ನಗರದ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು. ಈ ಕಾರ್ಯದಲ್ಲಿ ನಗರಸಭೆಯ ಸದಸ್ಯರ ಜವಾಬ್ದಾರಿ ಪ್ರಮುಖವಾಗಿದೆ ಎಂದರು.
ಯಾವುದೇ ನಗರ ಅಭಿವೃದ್ಧಿ ಆಗಬೇಕಾದರೆ ಒಬ್ಬರಿಂದ ಮಾತ್ರ ಸಾಧ್ಯವಿಲ್ಲ. ಅಧಿಕಾರಿಗಳಿಂದ ಹಿಡಿದು ಸಿಬ್ಬಂದಿಗಳುವರೆಗೂ ಶ್ರಮಿಸಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ರಾಯಚೂರು ನಗರಕ್ಕೆ ಕೃಷ್ಣಾ ನದಿ ಹಾಗೂ ರಾಂಪುರ್ ಜಲಾಶಯದಿಂದ ಕುಡಿಯುವ ನೀರು ಸರಾಬರಾಜ ಮಾಡಲಾಗುತ್ತಿದ್ದು, ನೀರು ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ನೀರು ಸರಬರಾಜು ಕುರಿತು ಕೆಲ ತಾಂತ್ರಿಕ ಸಮಸ್ಯೆಗಳಿವೆ. ಅವುಗಳನ್ನು ಅತಿ ಶೀಘ್ರದಲ್ಲೇ ಬಗೆಹರಿಸಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ನಗರದಲ್ಲಿ ಕುಡಿಯುವ ನೀರು ನಿರ್ವಹಣೆ ಕ್ರಮಬದ್ಧತೆ ಮತ್ತು ಕನಿಷ್ಠ ೨-೩ವಾರ್ಡ್ಗಳಿಗೆ ಮುಂದಿನ ೧೦ದಿನಗಳಲ್ಲಿ ದಿನದ ೨೪ಗಂಟೆಗಳ ಕಾಲ ನಿರಂತರ ಕುಡಿಯುವ ನೀರು ಪೂರೈಕೆ ಪ್ರಯೋಗಕ್ಕಾಗಿ ನಗರಸಭೆಯ ಹಿರಿಯ ಸದಸ್ಯರ ಹಾಗೂ ಇಂಜಿನಿಯರಿAಗ್ ವಿಭಾಗದ ತಂಡ ರಚಿಸಿ ಪ್ರಾಯೋಗಿಕ ಕಾರ್ಯನಿರ್ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಎ.ವಸಂತ ಕುಮಾರ್ ಅವರು ಮಾತನಾಡಿ, ಎರಡು ನದಿಗಳು ತುಂಬಿ ಹರಿಯುತ್ತಿವೆ. ಆದರೂ ನಗರಕ್ಕೆ ನಿರಂತರ ನೀರು ಪೂರೈಕೆ ಮಾಡತ್ತಿಲ್ಲ. ಎಂಬ ಆರೋಕ್ಕೆ ಸಂಬAಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಗರಕ್ಕೆ ನಾಲ್ವತ್ತು ಎಂಎಲ್ಡಿ ನೀರು ಪೂರೈಕೆ ಆಗುತ್ತಿದ್ದರು. ಪ್ರತಿನಿತ್ಯ ನೀರು ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕೆಂದರು.
ನಗರಸಭೆಯ ವ್ಯಾಪ್ತಿಯ ವಾರ್ಡ್ಗಳಲ್ಲಿ ಬೀದಿ ದೀಪಗಳ ಸಮಸ್ಯೆಗಳನ್ನು ಕಡಿಮೆ ಮಾಡಲು ಹಾಗೂ ನಗರದ ಸೌಂದರ್ಯಕ್ಕಾಗಿ ನಗರಸಭೆಯ ಎಲ್ಲಾ ವಾರ್ಡ್ಗಳಲ್ಲಿ ಲೈಟ್ ವ್ಯವಸ್ಥೆ ಮಾಡಲು ನಗರಸಭೆಯ ಸೇವಿಂಗ್ ಅಮೌಂಟ್‌ನಲ್ಲಿ ಟೆಂಡರ್ ಕರೆಯಲು ಈಗಾಗಲೇ ತೀರ್ಮಾನ ಮಾಡಲಾಗಿದ್ದು, ಕೆಲವೇ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ ಎಂದು ನಗರಸಭೆಯ ಪೌರಾಯುಕ್ತರು ಸಭೆಗೆ ಮಾಹಿತಿ ನೀಡಿದರು.
ನಗರಸಭೆಯ ಎಲ್ಲ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗಾಗಿ ಗುಣಮಟ್ಟದ ಕಾಮಗಾರಿಯಾಗಿ ಪೂರ್ಣಗೊಳ್ಳಿಸಬೇಕು. ನಗರಸಭೆಯ ಮಳಿಗೆಗಳ ಹರಾಜು ನಿಯಮದಂತೆ ಮಾಡಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ನಗರಸಭೆಯ ಆಡಳಿತಾಧಿಕಾರಿಗಳು ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಮಳೆಗಾಲ ಹಿನ್ನೆಲೆಯಲ್ಲಿ ನಗರಸಭೆ ವ್ಯಾಪ್ತಿಯ ಎಲ್ಲಾ ರಾಜ್ಯಕಾಲವೇಗಳ ಸ್ವಚ್ಛ ಕಾರ್ಯವನ್ನು ಕೈಗೊಳ್ಳಬೇಕು. ಅಲ್ಲದೆ ಜನಸಂಖ್ಯೆಗೆ ಅನುಗುಣವಾಗಿ ನಗರಸಭೆಯಲ್ಲಿ ಪೌರಕಾರ್ಮಿಕರು ಇಲ್ಲ ಪೌರಕಾರ್ಮಿಕರ ನೇಮಕಾತಿಗಾಗಿ ಸ್ವಂತ ಆದಾಯ ಹೆಚ್ಚಳ ಆಗಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಸ್ವಂತ ಆದಾಯವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ನಗರಸಭೆಯ ಸದಸ್ಯರು ಹಾಗೂ ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ತಾಂತ್ರಿಕ ವಿಭಾಗದ ಅಧಿಕಾರಿಗಳಾದ ನವೀನ್ ಕುಮಾರ್, ರಾಹುಲ್, ಮೂರ್ತಿ, ಮಲ್ಲಿಕಾರ್ಜುನ ಸೇರಿದಂತೆ ನಗರಸಭೆಯ ಅಧಿಕಾರಿಗಳು ಇದ್ದರು.