Permission for prosecution against CM: What will be the action of the state government will be announced in the evening
ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಸಂಕಷ್ಟ ತಂದೊಡ್ಡಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ಬೆನ್ನಲ್ಲೇ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಮಾಲೋಚನೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇಂದು ಸಂಜೆ ೫ ಗಂಟೆಗೆ ಸಚಿವ ಸಂಪುಟ ವಿಶೇಷ ಸಭೆ ಕರೆದಿದ್ದಾರೆ. ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ಕರೆದಿರುವುದನ್ನು ಸಚಿವರೂ ದೃಢಪಡಿಸಿದ್ದಾ
ಸಂಜೆ ಸಿಎಂ ಸಿದ್ದರಾಮಯ್ಯ ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಸಂಜೆ ೫ ಗಂಟೆಗೆ ಬೆಂಗಳೂರಿಗೆ ಬರುವಂತೆ ಬುಲಾವ್ ಬಂದಿದೆ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಹೀಗಾಗಿ ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ರ‍್ಕಾರದ ತರ‍್ಮಾನ ಏನಿರಲಿದೆ ಎಂಬುದು ಸಂಜೆ ವೇಳೆಗೆ ಗೊತ್ತಾಗಲಿದೆ.
ಪ್ರಾಸಿಕ್ಯೂಷನ್ಗೆ ಅನುಮತಿ ವಿರೋಧಿಸಿ ಸಂಪುಟದಲ್ಲಿ ನರ‍್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.