Breaking News

ಕಾಂಗ್ರೆಸ್ ಕಾರ್ಯಕರ್ತರಿಂದ : ರಾಜ್ಯಪಾಲರ ವಿರುದ್ಧ ಪ್ರತಿಭಟನೆ,,,

By Congress Workers: Protest Against Governor

ಜಾಹೀರಾತು


ವರದಿ : ಪಂಚಯ್ಯ ಹಿರೇಮಠ,,,
ಕೊಪ್ಪಳ: ತಾಲೂಕಿನ ಬೂದುಗುಂಪಾ ಕ್ರಾಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿ ಕೆಲ ಕಾಲ ಕೊಪ್ಪಳ – ಗಂಗಾವತಿ ರಸ್ತೆ ತಡೆ ನಡೆಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಕೀರಪ್ಪ ಎಮ್ಮಿ ಮಾತನಾಡಿ, ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ಅಣತಿಯಂತೆ ವರ್ತಿಸುತ್ತಿದ್ದಾರೆ, ಅಧಿಕಾರ ದುರುಪಯೋಗ ಮಾಡಿಕೊಂಡು ಸಂವಿಧಾನ ಬಾಹೀರು ನಿರ್ಣಯ ಕೈಗೊಂಡಿದ್ದಾರೆ.

ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಖಂಡನೀಯವಾಗಿದೆ. ಕೇಂದ್ರದ ಮೋದಿ ಸರಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ ಭವನವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ವಿಪರ್ಯಾಸವಾಗಿದೆ ಎಂದು ಕಿಡಿ ಕಾರಿ ಮಾತನಾಡಿದರು.

ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ ಅನುಮತಿಯನ್ನು ವಾಪಸ ಪಡೆಯಬೇಕು. ಇಲ್ಲವಾದರೆ ಸಿದ್ದರಾಮಯ್ಯ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಂತರದಲ್ಲಿ ಕಾಂಗ್ರೆಸ್ ಮುಖಂಡರಾದ ಎ.ವಿ ಗುರುರಾಜ್, ನಜೀರಸಾಬ ಅರಗಂಜಿ, ಗಿರೀಶ್ ಹಿರೇಮಠ, ಬಸವರಾಜ ಪೆದ್ಲ, ಸೀಮಣ್ಣ ಗಬ್ಬೂರ, ಕುಬೇರ ಮಜ್ಜಿಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರಿಯಪ್ಪ ಸಂಗಟಿ, ದಾಸಪ್ಪ ಕುದರಿಮೋತಿ, ರವಿ ಪೆದ್ಲ, ವೀರೇಶ ಬಡಗಿ, ಮಂಜುನಾಥ ಜೀನಿನ, ಅಮಾಜಪ್ಪ ತುರವಿಹಾಳ, ನಿಂಗಜ್ಜ ಅಡಿಗಿ, ಮಂಜುನಾಥ ಕಾಟ್ರಳ್ಳಿ, ಫಕೀರಪ್ಪ ದೊಡ್ಡಮನಿ, ನಾಗರಾಜ ಕಂಬಳಿ, ಆದೆಪ್ಪ ಇಂದರಗಿ, ಗೋಪಾಲ್ ಕೂಕನಪಳ್ಳಿ, ಸುರೇಶ್ ದನಕನದೊಡ್ಡಿ, ಪರಶುರಾಮ ಕೆರೆಹಳ್ಳಿ, ರಮೇಶ್ ಅಂಜನಳ್ಳಿ ಸೇರಿದಂತೆ ಇತರರು ಭಾಗವಹಿಸಿದ್ದರು.

About Mallikarjun

Check Also

ತೆಲಗಿ ಮಾದರಿಯಲ್ಲಿ ಮತ್ತೊಂದು ಭಾರೀ ನಕಲಿ ಛಾಪಾ ಕಾಗದ ಹಗರಣ

Another massive fake printing paper scam on the Telugu model ಕಾನೂನು ಬಾಹಿರ ಫ್ರಾಂಕಿಂಗ್ ಮೂಲಕ ಸರ್ಕಾರದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.