Chief Minister’s tour program on August 21
ಕೊಪ್ಪಳ, ಆಗಸ್ಟ್ 19 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸುವರು. ಅಲ್ಲಿಂದ ಬೆಳಗ್ಗೆ 11ಕ್ಕೆ ನಿರ್ಗಮಿಸಿ ರಸ್ತೆಯ ಮೂಲಕ ಕುಷ್ಟಗಿ, ಇಳಕಲ್ ಮಾರ್ಗವಾಗಿ ಮಧ್ಯಾಹ್ನ 12.30ಕ್ಕೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುವರು.
ಮಧ್ಯಾಹ್ನ 3 ಗಂಟೆಗೆ ಆಲಮಟ್ಟಿಯಿಂದ ನಿರ್ಗಮಿಸಿ 04.30ಕ್ಕೆ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸಿ, ಅಲ್ಲಿಂದ 04.40ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.