Breaking News

ಸಂಕಷ್ಟದಿಂದ ಪಾರಾಗಲು ಕಾನೂನು ಸಮರಕ್ಕೆ ಹೈ ಕೋರ್ಟ್ಮೊರೆ- ಸಿಎಂ ಸಿದ್ದರಾಮಯ್ಯ

High Courtmore for legal battle to get out of trouble- CM Siddaramaiah

ಜಾಹೀರಾತು
Screenshot 2024 08 19 14 20 24 21 680d03679600f7af0b4c700c6b270fe7 300x132

ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನಿದ್ದೆಗೆಡುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ತಮ್ಮ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೇರಿದಂತೆ ಕಾನೂನು ತಜ್ಞರೊಂದು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ ಸಿಎಂ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕರ‍್ಟ್‌ ಮೊರೆ ಹೋಗಲು ನರ‍್ಧರಿಸಿದ್ದಾರೆಂದು ತಿಳಿದುಬಂದಿದೆ.

ಸಿಎಂ ಪರ ವಕಾಲತ್ತು ವಹಿಸಲು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಕಬಿಲ್ ಸಿಬಲ್ ನವದೆಹಲಿಯಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸೋಮವಾರ ಪ್ರಕರಣದ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಹೈಕರ‍್ಟ್ ನಲ್ಲಿ ರ‍್ಜಿ ಸಲ್ಲಿಸುವ ಹಿನ್ನೆಲೆಯಲ್ಲಿ ಸೋಮವಾರ ಮಂತ್ರಾಲಯದ ಗುರು ರಾಘವೇಂದ್ರ ದೇಗುಲಕ್ಕೆ ಭೇಟಿ ನೀಡಬೇಕಿದ್ದ ಸಿದ್ದರಾಮಯ್ಯ, ಈ ಭೇಟಿಯನ್ನು ರದ್ದುಗೊಳಿಸಿದ್ದಾರೆಂದು ತಿಳಿದುಬಂದಿದೆ.

ಏತನ್ಮಧ್ಯೆ, ಪಕ್ಷದ ಹೈಕಮಾಂಡ್ ನಾಯಕರಾದ ಎಐಸಿಸಿ ಪ್ರಧಾನ ಕರ‍್ಯರ‍್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸರ‍್ಜೇವಾಲಾ ಅವರು ಪ್ರಕರಣ ದಾಖಲಿಸುವ ಸಾಧಕ-ಬಾಧಕಗಳ ಕುರಿತು ಸಿಎಂ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕರ‍್ಜುನ ರ‍್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಪಕ್ಷದ ೧೩೬ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗಸ್ಟ್ ೨೨, ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೆ ಸಿದ್ದರಾಮಯ್ಯ ಕರೆ ನೀಡಿದ್ದು, ಈ ಸಭೆ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾದರೆ ಅವರು ಸಿಎಂ ಆಗಿ ಮುಂದುವರಿಯಬೇಕೇ ಅಥವಾ ರಾಜೀನಾಮೆ ನೀಡಬೇಕೇ ಎಂಬುದರ ಕುರಿತಂತೆ ಈ ಸಭೆಯಲ್ಲಿ ರ‍್ಚೆಗಳು ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಆಗಸ್ಟ್ ೨೩ ರಂದು ಸಿದ್ದರಾಮಯ್ಯ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ನವದೆಹಲಿಗೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ನೀಡಿದ ಬಳಿಕ ಮಲ್ಲಿಕರ‍್ಜುನ ರ‍್ಗೆ ಅವರು ಶನಿವಾರ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಮಲ್ಲಿಕರ‍್ಜುನ ರ‍್ಗೆ ಭೇಟಿ ಬಳಿಕ ಕಲ್ಯಾಣ-ರ‍್ನಾಟಕದ ಎಸ್‌ಸಿ/ಎಸ್‌ಟಿ ಶಾಸಕರು, ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಸೇರಿದಂತೆ ರ‍್ಗೆ ಬೆಂಬಲಿಗರು ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಾಕ್ಷ್ಯಗಳಿಲ್ಲ. ಹೀಗಾಗಿ ಇದು ದೊಡ್ಡ ಸಮಸ್ಯೆಯೇ ಅಲ್ಲ. ಆದರೆ, ಎಫ್‌ಐಆರ್ ದಾಖಲಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಮಸ್ಯೆಗಳಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

About Mallikarjun

Check Also

screenshot 2025 10 28 18 31 46 31 e307a3f9df9f380ebaf106e1dc980bb6.jpg

ಕೊಪ್ಪಳಜಿಲ್ಲೆಯಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಹೆಸರಿನಲ್ಲಿ ಯುಗಾದಿ ೨೦೦೦ ಕೋಟಿ ಅನುದಾನ ದುರ್ಬಳಿಕೆಸಿಬಿಐ ತನಿಖೆಗೆ ಸಾಮಾಜಿಕ ಹೋರಾಟಗಾರ ಬಿ.ಲಕ್ಷ್ಮಿ ಪತಿ ಆಗ್ರಹ.

Social activist B. Lakshmi's husband demands CBI investigation into misuse of Ugadi 2000 crore grant …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.