The stalwart leader of the backward class. Devaraju Arasu- NS Bosaraju
ಹಿಂದುಳಿದ ವರ್ಗದ ಧೀಮಂತ ನಾಯಕ ದಿ. ದೇವರಾಜ್ ಅರಸು ಜಯಂತ್ಯೋತ್ಸವ
ರಾಯಚೂರು: ಜಿಲ್ಲಾಡಳಿತ, ನಗರಸಭೆ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಸಹಯೋಗದೊಂದಿಗೆ ನಗರದ ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಹಿಂದುಳಿದ ಧೀಮಂತ ನಾಯಕರಾದ ದಿ. ದೇವರಾಜು ಅರಸು ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣದ ಜೊತೆಗೆ ಸರ್ವ ಜನಾಂಗದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ ಮಹಾನ್ ನಾಯಕ ದಿ ದೇವರಾಜು ಅರಸು ಎಂದರು.
ಈ ಸಂದರ್ಭದಲ್ಲಿ ರಾಯಚೂರು ಲೋಕಸಭಾ ಸಂಸದರಾದ ಜಿ ಕುಮಾರ್ ನಾಯಕ್, ಜಿಲ್ಲಾಧಿಕಾರಿ ನಿತೀಶ್ ಕುಮಾರ್, ಹಿಂದುಳಿದ ವರ್ಗದ ಅಧಿಕಾರಿ ಬಿಎಸ್ ವಾಲ್ಮೀಕಿ, ಕಾಂಗ್ರೆಸ್ ಮುಖಂಡರಾದ ಜಯಣ್ಣ, ಕೆ ಶಾಂತಪ್ಪ, ರುದ್ರಪ್ಪ ಅಂಗಡಿ, ಹನುಮಂತು ಹೊಸೂರ್, ವೀರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು