Site inspection for construction of CC road and drain
ಕೂಡ್ಲಿಗಿ: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ಸಮಗ್ರ ಅಭಿವೃದ್ಧಿಗೆ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. 3 ಕೋಟಿ ಯೋಜನೆ ರೂಪಿಸಿದ್ದಾರೆ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ ಹೇಳಿದರು.
ಶಾಸಕರ ದೂಚನೆ ಮೇರೆಗೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಎಂಜನಿಯರ್ ಕೆ. ನಾಗನಗೌಡ ಅವರೊಂದಿಗೆ ಅಂಬೇಡ್ಕರ್ ನಗರಕ್ಕೆ ಭೇಟಿ ನೀಡಿ, ಸಿಸಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಎಲ್ಲೆಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪರಿಶೀಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ನಗರದಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಈಗಾಗಲೇ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಅಂಬೇಡ್ಕರ್ ನಗರ ಸೇರಿದಂತೆ ಅಕ್ಕ ಪಕ್ಕದ ವಾರ್ಡಿಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಲು ಇಂದು ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿಯನ್ನು ಅರಂಭಿಸಲಾಗುವುದು, ಹಂತ ಹಂತವಾಗಿ ಬಿಡುಗಡೆಯಾಗಲಿರುವ ಅನುದಾನದಲ್ಲಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಸಮಗ್ರ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಿಕೊಂಡಿದ್ದಾರೆ. ಅದರಂತೆ ಪಟ್ಟಣದ ಪ್ರತಿ ವಾರ್ಡಿನಲ್ಲಿಯೂ ಕುಡಿಯುವ ನೀರು, ಚರಂಡಿ, ಸಿಸಿ ರಸ್ತೆ ನಿರ್ಮಾಣ ಮಾಡಲು ಬದ್ದರಾಗಿದ್ದಾರೆ ಎಂದು ತಿಳಿಸಿದ, ಅವರು ಕೊಳಚೆ ನಿರ್ಮೂಲ ಮಂಡಳಿಯಿಂದ ಮನೆಗಳನ್ನು ನಿರ್ಮಿಸಿಕೊಡಲಾಗುತ್ತಿದ್ದು, ಬಡವರು ಇದರ ಲಾಭ ಪಡೆಯಬೇಕು ಎಂದು ಕೋರಿದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಎಂಹನಿಯರ್ ಕೆ. ನಾಗನಗೌಡ, ಮುಖಂಡರಾದ ಎಸ್. ದುರುಗೇಶ್, ಪ್ರಭಾಕರ್, ನಲ್ಲಮುತ್ತಿ ದುರುಗೇಶ್, ಕೊಂಡಯ್ಯರ ರಾಘವೇಂದ್ರ, ನಲ್ಲಮುತ್ತಿ ದುರುಗೇಶ್ ಇದ್ದರು.
ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರ ಸೂಚನೆ ಮೇರೆಗೆ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ ಹಾಗೂ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಎಂಜನಿಯರ್ ಕೆ. ನಾಗನಗೌಡ ಅವರು ಸ್ಥಳೀಯ ಮುಖಂಡರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.