Inherited property dispute: Brother’s murder by his own family

ಮಾನ್ವಿ:ತಾಲೂಕಿನ ಕುರ್ಡಿ ಗ್ರಾಮದಲ್ಲಿ ಪಿತ್ರಾರ್ಜಿತ ಆಸ್ತಿ ವಿವಾದ ಹಿನ್ನೆಲೆ ತಮ್ಮಂದಿರಿಂದಲೇ ಅಣ್ಣನ ಕೊಲೆ ನಡೆದಿದೆ.
ಸಂಜಯ್ ಕುರ್ಡಿಕರ್ (38) ಕೊಲೆಯಾದ ವ್ಯಕ್ತಿ. ಪಿತ್ರಾರ್ಜಿತ ಆಸ್ತಿ ಅಣ್ಣತಮ್ಮಂದಿರಿಗೆ ಹಂಚಿಕೆ ಆಗಿರಲಿಲ್ಲ. ನ್ಯಾಯಾಲಯ ಮೆಟ್ಟಿಲು ಏರಿ ತನ್ನ ಪಾಲಿನ ಆಸ್ತಿಯನ್ನ ಸಂಜಯ್ ಪಡೆದಿದ್ದ. ಇದರಿಂದ ಆಕ್ರೋಶಗೊಂಡಿದ್ದ ಉಳಿದ ಸಹೋದರರು ಅಣ್ಣ ಸಂಜಯ್ ಜೊತೆ ಜಗಳ ಮಾಡಿದ್ದಾರೆ. ಗ್ರಾಮದ ದೇವಿ ವೃತ್ತದಲ್ಲಿ ಹಾಡುಹಗಲೇ ತಮ್ಮಂದಿರು ಅಣ್ಣನಿಗೆ ಕಬ್ಬಿಣದ ರಾಡ್, ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಆಸ್ತಿ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.

ಆರೋಪಿಗಳಾದ ಸಂಜೀವ್, ಸಂಘರ್ಷ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರು ಜನ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ದಾಖಲಾಗಿದೆ. ಪೊಲೀಸರು ಆರೋಪಿಗಳ ವಿಚಾರಣೆ ಮುಂದುವರೆಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.