Breaking News

ಪೋಲಿಸ್ ಠಾಣೆಯಲ್ಲಿ ಗಣೇಶ್ ಹಬ್ಬ, ಈದ್ ಮಿಲಾದ್ ಪ್ರಯುಕ್ತ ಶಾಂತಿ ಸಭೆ

Ganesh Festival, Eid Milad Peace Meeting at Police Station

ಜಾಹೀರಾತು

ಕೊಟ್ಟೂರು : ಮಾರ್ಗಸೂಚಿ ಪಾಲನೆಯೊಂದಿಗೆ ಶಾಂತಿಯುತವಾಗಿ ಗಣೇಶೋತ್ಸವ ,ಈದ್ ಮಿಲಾದ್ ಆಚರಿಸಲು ಡಿವೈಎಸ್ಪಿ  ಮಲ್ಲೇಶ್ ಮಲ್ಲಾಪುರ ನೇತೃತ್ವದಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ನಿರ್ಧರಿಸಲಾಯಿತು.

ಪೊಲೀಸ್‌ ಠಾಣೆ ಆವರಣದಲ್ಲಿ ಭಾನುವಾರ ಪೋಲಿಸ್ ಇಲಾಖೆ ಆಯೋಜಿಸಿದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ತಾಲೂಕಿನ ವಿವಿಧ ಸಮುದಾಯ, ಧರ್ಮಗಳ ಮುಖಂಡರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.

ಡಿವೈಎಸ್ಪಿ  ಮಲ್ಲೇಶ್ ಮಲ್ಲಾಪುರ ಮಾತನಾಡಿ, ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಸಾಮರಸ್ಯದಿಂದ ಆಚರಿಸಬೇಕು. ಯಾವುದೇ ಅಡಚಣೆ ಆಗದಂತೆ ಎಚ್ಚರಿಕೆ ವಹಿಸಬೇಕು .ಮೂರ್ತಿ ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯಲು ಪಟ್ಟಣ ಪಂಚಾಯಿತಿ,ಕೆಇಬಿ, ಅಗ್ನಿಶಾಮಕ ದಳ ಪೊಲೀಸ್ ಇಲಾಖೆ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆಯಡಿ ಅವಕಾಶ ಕಲ್ಪಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಒಂದೆಡೆ ಅನುಮತಿಯನ್ನು ನೀಡುವರು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಸರ್ಕಾರದ ನಿಯಮದಂತೆ ಮೂರು, ಐದು, ಅನ್ನೊಂದು ದಿನಗಳ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ ಎಂದು ತಿಳಿಸಿದರು.

ಸರ್ಕಲ್ ಇನ್ಸ್ ಪೆಕ್ಟರ್ ವೆಂಕಟಸ್ವಾಮಿ, ಪಿಎಸ್ಐ ಗೀತಾಂಜಲಿ ಶಿಂಧೆ ಮಾತನಾಡಿ, ದೇವಸ್ಥಾನ ಹಾಗೂ ತಮ್ಮ ತಮ್ಮ ಮನೆಗಳಲ್ಲಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಗಣೇಶ ಹಬ್ಬ ಆಚರಿಸಬೇಕು. ಗುಂಪು ಗೂಡಲು ಅವಕಾಶವಿರುವುದಿಲ್ಲ. ನಿಯಮದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ತಿಳಿಸಿದರು.ಗಣೇಶೋತ್ಸವ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆಇಬಿ ಅಧಿಕಾರಿ ಚೇತನ್ ಕುಮಾರ್,ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಅಗ್ನಿಶಾಮಕ ದಳ ಅಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಮತ್ತು ಮುಸ್ಲಿಂ  ಪ್ರಮುಖ ಮುಖಂಡರು  ಉಪಸ್ಥಿತರಿದ್ದರು.

About Mallikarjun

Check Also

2ನೂತನಅಂಗನವಾಡಿಯನ್ನು ನಗರಸಭೆ ಸದಸ್ಯ ಶ್ರೀ ಮತಿ “ಹುಲಿಗೆಮ್ಮ ಕಿರಿಕಿರಿ” ಇವರಿಂದ ಅಂಗನವಾಡಿ ಕೇಂದ್ರಗಳ ಉದ್ಘಾಟನೆ

2 New Anganwadi Centers Inaugurated by Municipal Council Member Shri Mati “Huligemma Yara” ಕರ್ನಾಟಕ ಸರ್ಕಾರಜಿಲ್ಲಾ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.